ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಆರ್ ಐ
11:09 AM Nov 09, 2023 IST | veerabhadra
ಬೆಂಗಳೂರು,ನವೆಂಬರ್,9,2023(www.justkannada.in): ಲಂಚ ಸ್ವೀಕರಿಸುವ ವೇಳೆ ಬೆಂಗಳೂರಿನ ಮಹದೇವಪುರದ ಆರ್ ಐ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಹದೇವಪುರ ಆರ್ಐ ವಸಂತ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೃಷಿ ಭೂಮಿಗೆ ಖಾತಾ ಪೋಡಿ ಮಾಡಿಕೊಡಲು 28 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆರ್ಐ ವಸಂತ್ ಅವರು ಈಗಾಗಲೇ 3.5 ಲಕ್ಷ ಹಣ, 4 ಲಕ್ಷದ ಚೆಕ್ ಪಡೆದಿದ್ದಾರೆ. 4 ಲಕ್ಷ ರೂ. ಪಡೆಯುವಾಗ ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ವಸಂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ವಸಂತ್ ಮನೆಯಲ್ಲಿದ್ದ 9 ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: RI – Lokayukta- trap -accepting -bribe