For the best experience, open
https://m.justkannada.in
on your mobile browser.

ರಾಕ್​ ಲೈನ್ ಮಾಲ್ ​ಗೆ ಬೀಗಮುದ್ರೆ ಹಾಕಿದ ಬಿಬಿಎಂಪಿ.

11:20 AM Feb 14, 2024 IST | prashanth
ರಾಕ್​ ಲೈನ್ ಮಾಲ್ ​ಗೆ ಬೀಗಮುದ್ರೆ ಹಾಕಿದ ಬಿಬಿಎಂಪಿ

ಬೆಂಗಳೂರು, ಫೆಬ್ರವರಿ 14,2024(www.justkannada.in):   ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ನಟ, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್  ಒಡೆತನದ ರಾಕ್​ಲೈನ್ ಮಾಲ್ ​ಗೆ ಬಿಬಿಎಂಪಿ ಬೀಗಮುದ್ರೆ ಹಾಕಿದೆ.

ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ರಾಕ್​​ಲೈನ್​​ ಮಾಲ್​ 2011 ರಿಂದ 2023ರವರೆಗೆ 11.51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಟಿ ನೋಟಿಸ್ ನೀಡಿತ್ತು. ನೋಟಿಸ್​ ನೀಡಿದರೂ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ದಾಸರಹಳ್ಳಿಯ ಬಿಬಿಎಂಪಿ ಕಂದಾಯ ಅಧಿಕಾರಿಗಳು ಮಾಲ್​​ಗೆ ಬೀಗಮುದ್ರೆ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

2023ರ ನವೆಂಬರ್ ಮತ್ತು 2024ರ ಫೆಬ್ರವರಿ ನಡುವೆ 46,318 ಆಸ್ತಿಗಳಿಗೆ ತೆರಿಗೆ ಬಾಕಿ ವಸೂಲಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ. ಬಿಬಿಎಂಪಿ ಕಂದಾಯ ಅಧಿಕಾರಿಗಳು ನಿವೇಶನಗಳನ್ನು ಸೀಲ್ ಮಾಡಿದರೂ ತೆರಿಗೆ ಪಾವತಿಸದ ಪ್ರಕರಣಕ್ಕೆ ಸಂಬಂಧಿಸಿದ 7,203 ಆಸ್ತಿಗಳನ್ನು ಜಪ್ತಿ ಮಾಡಿದ್ದಾರೆ.

Key words: Rock Line Mall - sealed - BBMP.

Tags :

.