HomeBreaking NewsLatest NewsPoliticsSportsCrimeCinema

ನ್ಯಾ. ಸದಾಶಿವ ಆಯೋಗ ವರದಿ ವಿಚಾರ:  ಸರ್ಕಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಸವಾಲು.

05:58 PM Jan 19, 2024 IST | prashanth

ಬೆಂಗಳೂರು, ಜನವರಿ,19,2024(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬದ್ದತೆ ಇದ್ದರೆ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡಲಿ ಎಂದು  ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ,  ಕಾಂಗ್ರೆಸ್ ನವರು 2013 ರಿಂದ ನ್ಯಾ. ಸದಾಶಿವ ಆಯೊಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದು ಹೇಳುತ್ತ ಬಂದಿದ್ದಾರೆ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಮೊದಲಿನಿಂದಲೂ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಒಂದೆಡೆ ಸಂವಿಧಾನ ತಿದ್ದುಪಡಿ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳುತ್ತಾರೆ. ಇನ್ನೊಂದೆಡೆ ಸದಾಶಿವ ಆಯೋಗದ ವರದಿಯನ್ನು ತಾವೇ ಜಾರಿ ಮಾಡುವುದಾಗಿ ಹೇಳುತ್ತಾರೆ. ಇವರಿಗೆ ಬದ್ದತೆ ಇದ್ದರೆ ಸದಾಶಿವ ಆಯೋಗದ ವರದಿ ಜಾರಿ ಮಾಡಲಿ ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಅನುದಾನ ಮತ್ತು ಬರ ಪರಿಹಾರ ನೀಡಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಆರೋಪ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಬೊಮ್ಮಾಯಿ,  ಕೇಂದ್ರದ ಅನುದಾನ ವಿಚಾರ ಕುರಿತು ಕಾಂಗ್ರೆಸ್ ತಿರುಚುವ ಕೆಲಸ ಮಾಡುತ್ತಿದೆ.  ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿರುವುದಕ್ಕೆ ನಾವು ಉತ್ತರ ಕೊಟ್ಟಿದ್ದೇವೆ ಎಂದು ತಿಳಿಸಿದರು.

Key words:  Sadashiva Commission -report –issue-Former CM -Bommai –challenges-government

Tags :
challengesgovernmentSadashiva Commission -report –issue-Former CM -Bommai
Next Article