ಸ್ಯಾಂಡಲ್‌ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತ
05:42 PM Sep 06, 2024 IST | prashanth
ಬೆಂಗಳೂರು,ಸೆಪ್ಟಂಬರ್,6,2024 (www.justkannada.in): ಸ್ಯಾಂಡಲ್‌ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಓರ್ವ ಮಹಿಳೆಗೆ ಗಾಯವಾಗಿದೆ.
ನಿರ್ದೇಶಕ ನಾಗಶೇಖರ್ ಇಂದು ಮಧ್ಯಾಹ್ನ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಕಾರು ಡ್ರೈವ್ ಮಾಡಿಕೊಂಡು ಬರುವಾಗ ಕಾರು ಮರಕ್ಕೆ ಡಿಕ್ಕಿಯಾಗಿದೆ. ಪರಿಣಾಮ, ಓರ್ವ ಮಹಿಳೆಗೆ ಗಾಯವಾಗಿದೆ. ನಾಗಶೇಖರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ಬಳಿಕ ಮಹಿಳೆಯನ್ನ ಆಸ್ಪತ್ರೆ ದಾಖಲಿಸಿಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಬಿಟ್ಟು ನಾಗಶೇಖರ್ ತೆರಳಿದ್ದಾರೆ ಎನ್ನಲಾಗಿದೆ. ಜ್ಞಾನಭಾರತಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ನಾಗಶೇಖರ್ ಅವರ ಕಾರನ್ನು ವಶಕ್ಕೆ ಪಡೆದಿದ್ದಾರೆ.
Key words: Sandalwood, director, Nagasekhar, car, accident