ಲೋಕಸಭೆಯಲ್ಲಿ ಭದ್ರತಾ ಲೋಪ: ಮತ್ತೆ ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ- ಕೇಂದ್ರ ಸಚಿವ ರಾಜನಾಥ್ ಸಿಂಗ್.
01:51 PM Dec 14, 2023 IST
|
prashanth
ನವದೆಹಲಿ,ಡಿಸೆಂಬರ್,14,2023(www.justkannada.in): ನಿನ್ನೆ ಲೋಕಸಭೆಯಲ್ಲಿ ಉಂಟಾದ ಭದ್ರತಾ ವೈಪಲ್ಯ ಸಂಬಂಧ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂಸತ್ ನಲ್ಲಿ ಹೇಳಿಕೆ ನೀಡಿದ್ದಾರೆ.
ಇಂದು ಬೆಳಿಗ್ಗೆ ಲೋಕಸಭಾ ಕಲಾಪ ಆರಂಭವಾಗುತ್ತಿದ್ದಂತೆ ಧರಣಿಗಳಿದ ಪ್ರತಿಪಕ್ಷಗಳು ಘಟನೆ ಸಂಬಂಧ ಹೇಳಿಕೆ ನೀಡುವಂತೆ ಪಟ್ಟು ಹಿಡಿದವು. ಈ ವೇಳೆ ಲೋಕಸಭೆಯಲ್ಲಿ ಉತ್ತರಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇದು ದುರಾದೃಷ್ಠಕರ ಸಂಗತಿ. ಮುಂದೆ ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸರ್ಕಾರ ಹೇಳಿಕೆ ನೀಡುತ್ತಿರುವ ವೇಳೆಯೇ ಪ್ರತಿಪಕ್ಷದ ಸದಸ್ಯರು ಶೇಮ್, ಶೇಮ್ ಎಂಬ ಘೋಷಣೆ ಕೂಗಿ ಪ್ರತಿಭಟನೆಗಿಳಿದ ಹಿನ್ನೆಲೆ ಉಭಯ ಸದನಗಳ ಕಲಾಪವನ್ನು ಮುಂದೂಡಬೇಕಾಯಿತು.
Key words: Security lapse - Lok Sabha-Union Minister- Rajnath Singh.
Next Article