ಸೆ.3 ರಂದು ‘ಸುಳ್ಳು ಸುದ್ದಿ ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ’ ಕುರಿತು ವಿಚಾರ ಸಂಕಿರಣ
ಬೆಂಗಳೂರು, ಸೆಪ್ಟೆಂಬರ್ ,2,2024 (www.justkannada.in): ಕರ್ನಾಟಕ ಮಾಧ್ಯಮ ಅಕಾಡೆಮಿಯು ಇದೇ ಮಂಗಳವಾರ(ಸೆಪ್ಟಂಬರ್ 2) ಗಾಂಧಿ ಭವನದಲ್ಲಿ ಬೆಳಗ್ಗೆ 11:00 ಗಂಟೆಗೆ ‘ಸುಳ್ಳು ಸುದ್ದಿ -ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ ‘ಎನ್ನುವ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರ ಸಂಕಿರಣವನ್ನು ಉದ್ಘಾಟಿಸಬೇಕಿದ್ದು ಪರಿಷ್ಕೃತ ವೇಳಾಪಟ್ಟಿಯಂತೆ ಅವರು ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ . ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದಾರೆ.
ಎನ್ ಡಿಟಿವಿ ನಿಕಟಪೂರ್ವ ಗ್ರೂಪ್ ಎಡಿಟರ್ ಶ್ರೀನಿವಾಸನ್ ಜೈನ್ ಪ್ರಧಾನ ಭಾಷಣ ಮಾಡಲಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಅಧ್ಯಕ್ಷತೆ ವಹಿಸಿಲಿದ್ದಾರೆ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ. ವಿ. ಪ್ರಭಾಕರ್, ನಾಗಮಣಿ ಎಸ್ ರಾವ್, ಪ್ರೊಫೆಸರ್ ಬಿ.ಕೆ. ರವಿ, ಮುಖ್ಯಮಂತ್ರಿಗಳ ಹಾಗೂ ವಾರ್ತಾ ಇಲಾಖೆ ಕಾರ್ಯದರ್ಶಿಗಳಾದ ಡಾ. ಕೆ. ವಿ. ತ್ರಿಲೋಕ ಚಂದ್ರ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿರುತ್ತಾರೆ.
ಮಧ್ಯಾಹ್ನ 12.30 ರಿಂದ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ದಿನೇಶ್ ಅಮೀನಮಟ್ಟು, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರಾದ ಎಂ ಸಿದ್ದರಾಜು, ಹಿರಿಯ ಪತ್ರಕರ್ತರಾದ ಆಶಾ ಕೃಷ್ಣಸ್ವಾಮಿ, ಪ್ರಜಾವಾಣಿ ದಿನಪತ್ರಿಕೆ ಕಾರ್ಯ ನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ ಐನಕೈ, ಹಿರಿಯ ಪತ್ರಕರ್ತರಾದ ಸುಭಾಷ್ ಹೂಗಾರ್ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ರಾಜಕೀಯ ಸಂಪಾದಕರಾದ ಬನ್ಸಿ ಕಾಳಪ್ಪ ನಿರ್ವಹಿಸಲಿದ್ದಾರೆ.
ಮಧ್ಯಾಹ್ನ 2:30ಕ್ಕೆ, ಗೂಗಲ್ ಟೀಮ್ ನೊಂದಿಗೆ ಸಂವಾದ ಕಾರ್ಯಕ್ರಮವಿದ್ದು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇಲ್ಲಿನ ಹ್ಯುಮಾನಿಟೀಸ್ ಮತ್ತು ಸೋಶಿಯಲ್ ಸೈನ್ಸಸ್ ಮುಖ್ಯಸ್ಥರಾದ ಶಿಲ್ಪಾ ಕಲ್ಯಾಣ್ ಅವರು ನಡೆಸಿಕೊಡಲಿದ್ದಾರೆ. ಅವರೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿನಿಮಾ ಮತ್ತು ಛಾಯಾಚಿತ್ರ ನಿವೃತ್ತ ಅಧಿಕಾರಿಗಳಾದ ಟಿ. ಕೆಂಪಣ್ಣ ಅವರು ಭಾಗವಹಿಸಲಿದ್ದಾರೆ ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.
Key words: seminar Karnataka Media Academy, fake news, social justice