HomeBreaking NewsLatest NewsPoliticsSportsCrimeCinema

ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ಹೇಳಿಕೆ: ಸಿದ್ದರಾಮಯ್ಯ ಪರ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್

06:27 PM Jun 27, 2024 IST | prashanth

ದಾವಣಗೆರೆ,ಜೂನ್,27,2024 (www.justkannada.in):  ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಸ್ವಾಮೀಜಿಯವರು ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಮುಖ್ಯಮಂತ್ರಿ ಬದಲಾವಣೆ ಸಾಧ್ಯವೇ ಎಂದು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ.  ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ನಾವು ಹೇಳೋಕೆ ಸಾಧ್ಯವಿಲ್ಲ ಎಂದರು.

ಹೆಚ್ಚುವರಿ ಡಿಸಿಎಂ ಸ್ಥಾನ ಸೃಷ್ಠಿಗೆ ಆಗ್ರಹ ಕುರಿತು ಪ್ರತಿಕ್ರಿಯಿಸಿದ ಶಾಮನೂರು ಶಿವಶಂಕರಪ್ಪ,  ಜಾತಿವಾರು ಡಿಸಿಎಂ ಕೇಳುತ್ತಿದ್ದಾರೆ. ಅದೆಲ್ಲ ಸುಮ್ಮನೆ ಆಗಲ್ಲ. ಮಾಡಲ್ಲ. ಏನೇ ಮಾಡಿದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

Key words: Shamanur Shivshankarappa, batting, CM Siddaramaiah

Tags :
Shamanur Shivshankarappa- batting -CM Siddaramaiah
Next Article