For the best experience, open
https://m.justkannada.in
on your mobile browser.

ಹೃದಯಾಘಾತದಿಂದ ವಿರಕ್ತ ಮಠದ ಸಿದ್ದರಾಮ ಮಹಾಸ್ವಾಮಿ ನಿಧನ

11:36 AM Jul 08, 2024 IST | prashanth
ಹೃದಯಾಘಾತದಿಂದ ವಿರಕ್ತ ಮಠದ ಸಿದ್ದರಾಮ ಮಹಾಸ್ವಾಮಿ ನಿಧನ

ಕಲಬುರಗಿ, ಜುಲೈ,8,2024 (www.justkannada.in): ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಸಿದ್ದರಾಮ ಮಹಾಸ್ವಾಮಿ(35) ಇಂದು ನಿಧನರಾಗಿದ್ದಾರೆ.

ಇಂದು ಮುಂಜಾನೆ ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ ಸಿದ್ದರಾಮಶ್ರೀ ಅವರಿಗೆ ಹೃದಯಾಘಾತವಾಗಿ  ವಿಧಿವಶರಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ರಟಕಲ್ ಗ್ರಾಮದಲ್ಲಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸೇರಿ ಹಲವರು ಪಾಲ್ಗೊಂಡಿದ್ದರು.

Key words: Siddarama Mahaswamy ,Virakta Math, passed away

Tags :

.