For the best experience, open
https://m.justkannada.in
on your mobile browser.

ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ SIT ನೋಟಿಸ್.

11:01 AM May 31, 2024 IST | prashanth
ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ sit ನೋಟಿಸ್

ಬೆಂಗಳೂರು,ಮೇ,31,2024 (www.justkannada.in):  ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಕೇಸ್ ನಲ್ಲಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ನೋಟಿಸ್ ನೀಡಿದೆ.

ಪ್ರಕರಣ ಸಂಬಂಧ ನಾಳೆ ಸಂಜೆ  5ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೆ ಎಸ್ ಐಟಿ ನೋಟಿಸ್ ನೀಡಿದೆ.

ಇದೇ ವೇಳೆ ನೋಟಿಸ್‌ ನಲ್ಲಿ ಅಧಿಕಾರಿಗಳು ಭವಾನಿ ರೇವಣ್ಣನವರಿಗೆ ಮನೆಯಲ್ಲೇ ಕೂಡ ನೀವು ವಿಚಾರಣೆ  ಎದುರಿಸಲು ಅವಕಾಶ ಪಡೆದುಕೊಳ್ಳಬಹುದು ಎನ್ನಲಾಗಿದ್ದು ಭವಾನಿ ರೇವಣ್ಣ ಕೂಡ ಮನೆಯಲ್ಲಿ ನಾನು ವಿಚಾರಣೆಗೆ ಹಾಜರಾಗುವೆ ಆಂತ ತಿಳಿಸಿದ್ದಾರೆ ಎನ್ನಲಾಗಿದೆ.

ಇನ್ನು ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ಆದೇಶವನ್ನ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ಪ್ರಕಟಿಸಲಿದೆ.

Key words: SIT- notice- Bhavani Revanna - attend - hearing

Tags :

.