ಕಚೇರಿಯಲ್ಲಿ ಕುಳಿತು ಅಧಿಕಾರಿಗಳು ದರ್ಬಾರ್: ಸಚಿವ ಕೃಷ್ಣಬೈರೇಗೌಡ ಕಿಡಿ.
ಮೈಸೂರು,ಜನವರಿ,17,2024(www.justkannada.in): ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ದರ್ಬಾರ್ ನಡೆಸುವ ಸಂಸ್ಕೃತಿಯಲ್ಲಿ ನಾವಿದ್ದೇವೆ. ಈ ಸಂಸ್ಕೃತಿಯನ್ನ ಬಿಟ್ಟು ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಎಚ್ಚೆತ್ತುಕೊಂಡು ಕೆಲಸ ಮಾಡಬೇಕು ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಸೂಚಿಸಿದರು.
ಮೈಸೂರಿನ ಪ್ರಾದೇಶಿಕ ಆಯುಕ್ತರ ಚಾಮುಂಡೇಶ್ವರಿ ಸಭಾಂಗಣದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲೆಯ ಅಭಿವೃದ್ಧಿ ಮತ್ತು ಬರ ಕುರಿತು ಅಧಿಕಾರಿಗಳಿಂದ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ಪಡೆದರು. ಸಭೆಯಲ್ಲಿ ಶಾಸಕ ಜಿ.ಟಿ ದೇವೇಗೌಡ, ವಿಧಾನಪರಿಷತ್ ಸದಸ್ಯ ಸಿ. ಎನ್ ಮಂಜೇಗೌಡ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ಸಭೆಯಲ್ಲಿ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಬರಗಾಲ ನಿರ್ವಹಣೆಯಲ್ಲಿ ಕಂದಾಯ ಇಲಾಖೆ ಪಾತ್ರ ಬಹುಮುಖ್ಯ. ಸಮಸ್ಯೆಗಳು ಉಲ್ಬಣಿಸುವ ಮುನ್ನವೇ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕಂದಾಯ ಇಲಾಖೆಯ ಕೆಲಸದ ವಿಳಂಬ ಬಗ್ಗೆಯೇ ಜನರು ಮಾತನಾಡುತ್ತಿದ್ದಾರೆ. ಸಿಎಂ ಜನತಾ ದರ್ಶನದಲ್ಲಿ ಕಂದಾಯ ಇಲಾಖೆಯ ಸಮಸ್ಯೆ ಬಗ್ಗೆ ಹೆಚ್ಚಿನ ಆಗಮಿಸುತ್ತಿದ್ದಾರೆ. ನಾವು ತಾಳ್ಮೆಯಿಂದ ಹೇಳುತ್ತಿದ್ದೇವೆ. ಅದನ್ನ ಕೆಲವರು ಉದಾಸೀನವಾಗಿ ತೆಗೆದುಕೊಂಡಿದ್ದಾರೆ. ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ದರ್ಬಾರ್ ನಡೆಸುವ ಸಂಸ್ಕೃತಿಯಲ್ಲಿ ನಾವಿದ್ದೇವೆ. ಜಿಲ್ಲಾಧಿಕಾರಿಗಳು ತಹಸೀಲ್ದಾರ್ ಕೆಲಸ ಮಾಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಬೆಂಡೆತ್ತಿದ್ದರು.
ಮೈಸೂರು ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ. ಯಾವುದಾದರು ನ್ಯೂನ್ಯತೆಗಳು ಕಂಡು ಬಂದಲ್ಲಿ ಅದು ಸರ್ಕಾರ ಮತ್ತು ಸಿಎಂ ಮೇಲೆ ಪರಿಣಾಮ ಬೀರುತ್ತೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಸಿಎಂ ಜಿಲ್ಲೆಯಿಂದಲೂ ಅನೇಕರು ಸಮಸ್ಯೆ ಹೊತ್ತು ಬೆಂಗಳೂರಿಗೆ ಬರುತ್ತಾರೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಸಿಎಂ ಮತ್ತು ಡಿಸಿಎಂ ಬಗ್ಗೆ ಹೈಕಮಾಂಡ್ ನಿರ್ಧಾರ.
ಇನ್ನು ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣಭೈರೇಗೌಡ, ಯಾರು ಯಾವಾಗ ಸಿಎಂ ಆಗಬೇಕು. ಡಿಸಿಎಂ ಆಗಬೇಕು ಅಂತಾ ಹೈಕಮಾಂಡ್ ನಿರ್ಧರಿಸುತ್ತದೆ. ಆ ತೀರ್ಮಾನ ನಮ್ಮ ಕೈಯಲ್ಲಿ ಇರುವುದಿಲ್ಲ. ಈ ರೀತಿಯ ಚರ್ಚೆಗಳಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ. ಈ ರೀತಿ ವಿಚಾರ ಹೇಳಿ ಚರ್ಚೆಗೆ ಅವಕಾಶ ಕೊಡಬೇಡಿ ಅಂತಾ ಅವರಿಗೆ ಸೂಚನೆ ನೀಡುವ ಸ್ಥಾನದಲ್ಲಿ ನಾನು ಇಲ್ಲ. ನನ್ನ ಮನವಿ, ಸಲಹೆ ಇಷ್ಟೆ. ಇಂತಹ ವಿಚಾರಕ್ಕಿಂತ ಅಭಿವೃದ್ಧಿ ವಿಚಾರ ಚರ್ಚೆ ಆಗಲಿ ಅಷ್ಟೆ ಎಂದರು.
Key words: Sitting – office-officials- durbar- Minister- Krishnabairegowda-mysore