For the best experience, open
https://m.justkannada.in
on your mobile browser.

ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡವರಿಗೆ ಕೌಶಲ್ಯ ತರಬೇತಿ-ಸಚಿವ ಶರಣ ಪ್ರಕಾಶ್ ಪಾಟೀಲ್

10:28 AM Jan 10, 2024 IST | prashanth
ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡವರಿಗೆ ಕೌಶಲ್ಯ ತರಬೇತಿ ಸಚಿವ ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು, ಜನವರಿ 10,2024(www.justkannada.in):  ಯುವ ನಿಧಿ ಯೋಜನೆಗೆ ನೋಂದಾಯಿಸಿಕೊಂಡವರಿಗೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಚಿಂತಿಸಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಶರಣಪ್ರಕಾಶ್ ಪಾಟೀಲ್ಮ ಕೌಶಲ್ಯವಂತರಾಗಿ ಅವರು ಉದ್ಯೋಗದಲ್ಲಿ ತೊಡಗಿಸಿಕೊಂಡರೇ, ಅವರಿಗೆ ನಾವು ಮಾಸಿಕ ಹಣ ನೀಡಬೇಕಾಗುವುದಿಲ್ಲ. ಈ ಯುವಕರಿಗೆ ಉದ್ಯೋಗ ತರಬೇತಿ ನೀಡಲು ಮುಂದೆ ಬರುವ ಕಂಪನಿಗಳತ್ತ ನಾವು ಗಮನ ಹರಿಸಿದ್ದೇವೆ. ಈ ಸಂಬಂಧ ಹೊಸ ಯೋಜನೆಯನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ತರಬೇತಿ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್​ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಪೈಕಿ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನೋಂದಣಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾದವರಿಗೆ ಮಾಸಿಕ 1,500 ರೂಪಾಯಿಗಳನ್ನು ಸರ್ಕಾರ ನೀಡಲಿದೆ.

Key words: Skill training – youth- fund -enrollees-Minister- Sharan Prakash Patil

Tags :

.