HomeBreaking NewsLatest NewsPoliticsSportsCrimeCinema

ವಸತಿ ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ: ಸರ್ಕಾರದ ವಿರುದ್ದ ಕೋಟಾ ಶ್ರೀನಿವಾಸ್ ಪೂಜಾರಿ ಕಿಡಿ.

11:00 AM Feb 19, 2024 IST | prashanth

ಬೆಂಗಳೂರು,ಫೆಬ್ರವರಿ,19,2024(www.justkannada.in):  ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಸಾಲುಗಳನ್ನು ಬದಲಾಯಿಸಿ ಬೇರೆಯೇ ಧ್ಯೇಯವಾಕ್ಯ ಅಳವಡಿಸಲಾಗಿದ್ದು ಈ ನಡೆಗೆ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ.

ವಿಜಯಪುರ ಜಿಲ್ಲೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು  ಅವರ ಕವಿತೆಯ ‘ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ’ ಎಂಬ ಬರಹಕ್ಕೆ ಬದಲಾಗಿ, ‘ಜ್ಞಾನ ದೇಗುಲವಿದು, ದೈರ್ಯವಾಗಿ ಪ್ರಶ್ನಿಸಿ’ ಎಂದು ಬರೆಯಿಸಲಾಗಿದೆ. ವಿಜಯಪುರ ‌ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಹೊಸ ಬರಹ ಕಾಣಿಸುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೋಟಾ ಶ್ರೀನಿವಾಸ ಪೂಜಾರಿ, ಕುವೆಂಪು ರಚನೆಯ ಬರಹವನ್ನ ಬದಲಿಸಿದ್ದಾರೆ. ಇದು ವಿಕೃತಕಾರಿ ಮನಸ್ಸು.  ಇದು ಖಂಡಿಸುತ್ತೇವೆ.  ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುತ್ತೇವೆ ಎಂದು ತಿಳಿಸಿದ್ದಾರೆ.

Key words: Slogan -change - residential schools- Kota Srinivas Pujari- against- Govt.

Tags :
againstchangeGovtKota Srinivas Pujariresidential schools.slogan
Next Article