ನಾಳಿನ ಮೈಸೂರು ಸಮಾವೇಶಕ್ಕೆ ಶ್ರೀನಿವಾಸ್ ಪ್ರಸಾದ್ ಬರ್ತಾರೆ- ಮಾಜಿ ಸಿಎಂ ಬಿಎಸ್ ವೈ.
06:27 PM Apr 13, 2024 IST
|
prashanth
ಮೈಸೂರು, ಏಪ್ರಿಲ್,13,2024 (www.justkannada.in): ನಾಳೆ ಮೈಸೂರಿನಲ್ಲಿ ನಡೆಯುವ ಪ್ರಧಾನಿ ಮೋದಿ ಸಮಾವೇಶಕ್ಕೆ ವಿ. ಶ್ರೀನಿವಾಸ್ ಪ್ರಸಾದ್ ಬರಲಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು.
ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ವಿ.ಶ್ರೀನಿವಾಸ್ ಪ್ರಸಾದ್ ನಾಳಿನ ಪ್ರಧಾನಿ ಮೋದಿ ಸಮಾವೇಶಕ್ಕೆ ಹೋಗಲ್ಲ ಎಂದಿದ್ದರು. ಈ ಕುರಿತು ಮಾತನಾಡಿದ ಬಿಎಸ್ ಯಡಿಯೂರಪ್ಪ, ನಾಳೆ ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ಸಮಾವೇಶ ಇದೆ. ಸಮಾವೇಶಕ್ಕೆ ಶ್ರೀನಿವಾಸ್ ಪ್ರಸಾದ್ ಬರುತ್ತಾರೆ. ಮೈಸೂರು ಭಾಗದಲ್ಲಿ ಶ್ರೀನಿವಾಸ್ ಪ್ರಸಾದ್ ನಮಗೆ ಶಕ್ತಿ . ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ ಎಂದರು.
Key words: Srinivas Prasad, attend, BS yeddyurappa
Next Article