HomeBreaking NewsLatest NewsPoliticsSportsCrimeCinema

ವಿ. ಶ್ರೀನಿವಾಸ್ ಪ್ರಸಾದ್ ನಿಧನ : ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

05:33 PM Apr 29, 2024 IST | prashanth
featuredImage featuredImage

ಮೈಸೂರು,ಏಪ್ರಿಲ್,29,2024 (www.justkannada.in): ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ನಿಧನ ಹಿನ್ನಲೆ, ನಾಳೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ವಿ.ಶ್ರೀನಿವಾಸ್  ಪ್ರಸಾದ್ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪೂರ್ವ ನಿಗದಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ 30.04.2024ರಂದು ರಜೆ ಘೋಷಿಸಲಾಗಿದೆ  ಸದರಿ ಆದೇಶವು ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ. ಮೃತ ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.

Key words: Srinivas Prasad, Holiday, mysore, Chamarajnagar

Tags :
V. Srinivasa Prasad-passed away- Holiday-mysore-Chamaraj nagar