HomeBreaking NewsLatest NewsPoliticsSportsCrimeCinema

SSLC ಪರೀಕ್ಷಾ ಫಲಿತಾಂಶ:  ಟಾಪರ್ಸ್ ಇವರೇ ನೋಡಿ..

11:25 AM May 09, 2024 IST | prashanth
ಅಂಕಿತಾ ಬಸಪ್ಪ

ಬೆಂಗಳೂರು,ಮೇ,9,2024 (www.justkannada.in): ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು,  ಈ ಬಾರಿ ಶೇ 73.04 ರಷ್ಟು ಫಲಿತಾಂಶ ಬಂದಿದೆ.

ಈ ಮಧ್ಯೆ ಈ ಬಾರಿ ಬಾಗಲಕೋಟೆಯ ಅಂಕಿತಾ ಬಸಪ್ಪ ಮೊದಲನೇ ಸ್ಥಾನಗಳಿಸಿದ್ದಾರೆ. ಅಂತಿತಾ ಬಸಪ್ಪ 625ಕ್ಕೆ 625 ಅಂಕಗಳನ್ನ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.  ಬೆಂಗಳೂರಿನ ಮೇದಾ ಪಿ ಶೆಟ್ಟಿ , ಮಧುಗಿರಿಯ ಹರ್ಷಿತಾ ಡಿಎಂ, ದಕ್ಷಿಣ ಕನ್ನಡ ಜಿಲ್ಲೆಯ ಚಿನ್ಮಯ್ ಚಿಕ್ಕೋಡಿಯ ಸಿದ್ದಾಂತ್ 624 ಅಂಕಗಳನ್ನ ಗಳಿಸಿ 2ನೇ ಸ್ಥಾನದಲ್ಲಿದ್ದಾರೆ.

ಅಂಕಿತಾ ಬಸಪ್ಪ

ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರದ್ದೇ ಮೈಲುಗೈಯಾಗಿದೆ.  441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. 2,87,416 ಮಂದಿ ಬಾಲಕರು ತೇರ್ಗಡೆಯಾಗಿದ್ದು, ತೇರ್ಗಡೆ ಪ್ರಮಾಣ ಶೇ 65.90 ಇದೆ. 3,43,788 ಬಾಲಕಿಯರು ತೇರ್ಗಡೆಯಾಗಿದ್ದು, ತೇರ್ಗಡೆ ಪ್ರಮಾಣ ಶೇ 81.11 ಇದೆ.

Key words: SSLC, Exam, Result,  Toppers

Tags :
SSLC -Exam –Result- Toppers
Next Article