SSLC ಫಲಿತಾಂಶ ಪ್ರಕಟ: ಈ ಬಾರಿ ಶೇ 73.04 ರಷ್ಟು ವಿದ್ಯಾರ್ಥಿಗಳು ಪಾಸ್: ಉಡುಪಿ ಜಿಲ್ಲೆ ಪ್ರಥಮ ಸ್ಥಾನ.
ಬೆಂಗಳೂರು,ಮೇ,9,2024 (www.justkannada.in): ರಾಜ್ಯದಲ್ಲಿ ನಡೆದಿದ್ದ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ ಶೇ 73.04 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ.
ಶಾಲಾ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿ ವತಿಯಿಂದ ಇಂದು ಸುದ್ದಿಗೋಷ್ಠಿ ನಡೆಸಿ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಲಾಯಿತು. 6,31,204 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶೇ 94 ರಷ್ಟು ಫಲಿತಾಂಶ ಬಂದಿದ್ದು ಪ್ರಥಮ ಸ್ಥಾನದಲ್ಲಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆ 92.12% ಫಲಿತಾಂಶದ ಮೂಲಕ 2ನೇ ಸ್ಥಾನ, ಶಿವಮೊಗ್ಗ ಜಿಲ್ಲೆ 88.67% ಫಲಿತಾಂಶದ ಮೂಲಕ 3ನೇ ಸ್ಥಾನದಲ್ಲಿದೆ, ಕೊಡಗು ಜಿಲ್ಲೆ 88.67% ರಷ್ಟಿದೆ.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಅಥವಾ kseab.karnataka.gov.in ನಲ್ಲಿ ನೇರ ಲಿಂಕ್ ಮೂಲಕವೂ ಪರಿಶೀಲಿಸಬಹುದು.
Key words: SSLC-result-karnataka- publish