For the best experience, open
https://m.justkannada.in
on your mobile browser.

ಎಸ್‌ ಎಸ್‌ ಎಲ್‌ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ.

06:17 PM Feb 20, 2024 IST | prashanth
ಎಸ್‌ ಎಸ್‌ ಎಲ್‌ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು,ಫೆಬ್ರವರಿ,20,2024(www.justkannada.in):  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ದಿನಾಂಕ ಪ್ರಕಟವಾಗಿದ್ದು, ಈ ಕೆಳಗಿನ ದಿನಾಂಕದಂತೆ ಪರೀಕ್ಷೆಗಳು ನಡೆಯಲಿವೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವ ಎಸ್‌. ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದು, ಮಾರ್ಚ್ 1 ರಿಂದ 22ರ ವರೆಗೆ ಪಿಯುಸಿ ಹಾಗೂ ಮಾರ್ಚ್​​ 25 ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.

ಅಲ್ಲದೆ, ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 2747 ಪರೀಕ್ಷಾ ಕೇಂದ್ರಗಳು ಇರಲಿದೆ.

ಎಲ್ಲ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದರೂ  ಪರೀಕ್ಷೆಗೆ ಹಾಜರಾಗಬೇಕು. ಮೂರು ಪರೀಕ್ಷೆಯಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾರ್ಕ್ಸ್ ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾರ್ಕ್ಸ್ ಮಾತ್ರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ‌ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷರಾದ ಮಂಜುಳಾ, ಪದವಿ ಪೂರ್ವ ಶಿಕ್ಷಣ‌ ಇಲಾಖೆ ನಿರ್ದೇಶಕರಾದ ಸಿಂಧೂ ಬಿ ರೂಪೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: SSLC- Second PUC- Exam- Date- Announced-minister-Madhu Bangarappa

Tags :

.