HomeBreaking NewsLatest NewsPoliticsSportsCrimeCinema

ನಿಶ್ಚಿತಾರ್ಥ ನಿಂತಿದ್ದಕ್ಕೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಭೀಕರ ಹತ್ಯೆ: ಆರೋಪಿ ಎಸ್ಕೇಪ್.

10:35 AM May 10, 2024 IST | prashanth

ಕೊಡಗು, ಮೇ, 10,2024 (www.justkannada.in): ಎಸ್​ಎಸ್​ಎಲ್​​ಸಿ ಫಲಿತಾಂಶ  ಪ್ರಕಟಗೊಂಡ ಬಳಿಕ ಉತ್ತಮ ಅಂಕ ಗಳಿಸಿ ಪಾಸ್ ಆಗಿದ್ದ ವಿದ್ಯಾರ್ಥಿನಿ ಬರ್ಬರವಾಗಿ ಹತ್ಯೆಯಾಗಿರುವ ಘಟನೆ  ಕೊಡಗು ಜಿಲ್ಲೆ   ಸೋಮವಾರಪೇಟೆಯ ಸೂರ್ಲಬ್ಬಿ ಗ್ರಾಮಾದಲ್ಲಿ ಘಟನೆ ನಡೆದಿದೆ.

ಮೀನಾ ಮೃತಪಟ್ಟ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ. ಓಂಕಾರಾಪ್ಪ ಎಂಬಾತನೇ ಕೊಲೆ ಆರೋಪಿ.  ಮೀನಾ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಗುರುವಾರ ಎಸ್ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೀನಾ ಉತ್ತಮ ಅಂಕ ಪಡೆದು ಪಾಸಾಗಿದ್ದಳು. ​

ಈ ನಡುವೆ ಓಂಕಾರಪ್ಪನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ಫಿಕ್ಸ್​ ಆಗಿತ್ತು. ಈ ವಿಚಾರ ತಿಳಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದಾರೆ. ಬಳಿಕ ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ತೆರಳಿದ್ದಾರೆ.

ನಿಶ್ಚಿತಾರ್ಥ ನಿಂತಿದ್ದಕ್ಕೆ ಕೋಪಗೊಂಡ ಓಂಕಾರಪ್ಪ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಚ್ಚಿನಿಂದ ವಿದ್ಯಾರ್ಥಿನಿಯನ್ನ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ

ಕೊಲೆ ನಡೆದ ಸ್ಥಳಕ್ಕೆ ಶ್ವಾನ ದಳ, ವಿಧಿ ವಿಜ್ಞಾನ ತಂಡ‌ ಭೇಟಿ ನೀಡಿದೆ. ಹಾಗೂ ಕೊಡಗು ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ‌ ಅನತಿ ದೂರದಲ್ಲಿ ಮಚ್ಚು ಪತ್ತೆಯಾಗಿದೆ. ಪೊಲೀಸರು ಆರೋಪಿಗಾಗಿ ತಿವ್ರ ಶೋಧ ನಡೆಸುತ್ತಿದ್ದಾರೆ.

Key words: SSLC, student, murder, kodagu

Tags :
SSLC -student – murder-kodagu
Next Article