HomeBreaking NewsLatest NewsPoliticsSportsCrimeCinema

ಎಸ್.ಟಿ ನಿಗಮದಲ್ಲಿ ಅಕ್ರಮದಲ್ಲಿ ನನ್ನ ಪಾತ್ರವಿಲ್ಲ: ಸಿಎಂ ರಾಜೀನಾಮೆ ಕೇಳಿದ್ರೆ ನೀಡಲು ಸಿದ್ದ- ಬಸನಗೌಡ ದದ್ದಲ್.

03:29 PM Jun 08, 2024 IST | prashanth

ಬೆಂಗಳೂರು, ಜೂನ್​,8,2024 (www.justkannada.in): ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ನಾನು ಯಾವುದೇ ಸಾಕ್ಷ್ಯ ನಾಶ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳಿದರೇ ನೀಡಲು ಸಿದ್ದ ಎಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಸನಗೌಡ ದದ್ದಲ್, ಅಂತರಾಜ್ಯಗಳಿಗೆ ಹಣ ವರ್ಗಾವಣೆಯಾದ ಮಾಹಿತಿ ಇದೆ.  ಹಣ ಯಾರ್ಯಾರ ಖಾತೆಗೆ ಹೋಗಿದೆ. ಎಲ್ಲಾ ಮಾಹಿತಿ ಕಲೆ ಹಾಕುತ್ತೇನೆ. ಆ ಹಣ ವಾಪಸ್ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ.  ಇದು ಪರಿಶಿಷ್ಟ ಪಂಗಡಕ್ಕೆ ಸೇರಿದ ಹಣ ಎಂದರು.

ಇದು ಕಂಪ್ಯೂಟರ್ ಯುಗ, ಎಲ್ಲವೂ ಕೂಡ ಅದರಲ್ಲೇ ಇರುತ್ತದೆ. ಹೀಗಿರುವಾಗ ನಾನು ಹೇಗೆ ಸಾಕ್ಷಿ ನಾಶಪಡಿಸುವುದಕ್ಕೆ ಆಗುತ್ತೆ. ಪ್ರತಿಪಕ್ಷದವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ, ಅದು ಅವರ ಧರ್ಮ. ತನಿಖೆಗೆ ನಾನು ಸಹಕಾರ ಕೊಡುತ್ತೇನೆ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ನನ್ನ ಪಾತ್ರವಿಲ್ಲ. ಮುಖ್ಯಮಂತ್ರಿಗಳು ರಾಜೀನಾಮೆ ಕೇಳಿದರೆ ನಾನು ಕೊಡಲು ಸಿದ್ಧನಿದ್ದೇನೆ.  ಆ ಹಣವನ್ನು ವಾಪಸ್ ತರುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಇದು ಪರಿಶಿಷ್ಟ ಪಂಗಡಗಳಿಗೆ ಸೇರಿದ ಹಣ. ನೂರಕ್ಕೆ ನೂರರಷ್ಟು ಹಣವನ್ನು ತಂದೇ ತರುತ್ತೇವೆ ಎಂದು ಹೇಳಿದರು.

Key words: ST Corporation, illegal, case, Basanagowda Daddal

Tags :
ST Corporation- illegal-case -Basanagowda Daddal
Next Article