HomeBreaking NewsLatest NewsPoliticsSportsCrimeCinema

ಇನ್ನೂ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ- ಬಿ. ನಾಗೇಂದ್ರ ಸ್ಪಷ್ಟನೆ.

03:58 PM Jun 06, 2024 IST | prashanth

ಬೆಂಗಳೂರು,ಜೂನ್,6,2024 (www.justkannada.in): ವಾಲ್ಮಿಕಿ ಅಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಸ್ವತಃ ಬಿ.ನಾಗೇಂದ್ರ ಅವರು ಸ್ಪಷ್ಟನೆ ನೀಡಿದ್ದು, ನಾನು ಇನ್ನೂ ರಾಜೀನಾಮೆ ನೀಡಿಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಬಿ. ನಾಗೇಂದ್ರ, ನಾನು ಇನ್ನೂ ರಾಜೀನಾಮೆ ನೀಡಿಲ್ಲ. ಸಂಜೆ 4.30ಕ್ಕೆ ಸುದ್ದಿಗೋಷ್ಠಿ ನಡೆಸಿ ನಂತರ ತೀರ್ಮಾನ ಮಾಡುತ್ತೇನೆ ಎಂದಿದ್ದಾರೆ.

ಈ ನಡುವೆ ಇದೇ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ ಸಹ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದಾರೆ ಎಂದಿದ್ದರು. ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿರುವ ಸಚಿವ ಬಿ. ನಾಗೇಂದ್ರ ನಾನು ರಾಜೀನಾಮೆ ನೀಡಿಲ್ಲ ಎಂದು ಡಿಕೆ ಶಿವಕುಮಾರ್ ಅವರಿಗೂ ತಿಳಿಸಿದ್ದಾರೆ ಎನ್ನಲಾಗಿದೆ.

Key words: ST Corporation, scandal, minister, B. Nagendra

Tags :
ST- Corporation-scandal- minister-B. Nagendra
Next Article