For the best experience, open
https://m.justkannada.in
on your mobile browser.

ತೆರಿಗೆ ಸಂಗ್ರಹಿಸಿ ಕೊಡುವಲ್ಲಿ ರಾಜ್ಯಕ್ಕೆ 2ನೇ ಸ್ಥಾನ: ತೆರಿಗೆ ಪಾಲು ಪಡೆಯುವಲ್ಲಿ10ನೇ ಸ್ಥಾನ- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್.

12:18 PM Feb 12, 2024 IST | prashanth
ತೆರಿಗೆ ಸಂಗ್ರಹಿಸಿ ಕೊಡುವಲ್ಲಿ ರಾಜ್ಯಕ್ಕೆ 2ನೇ ಸ್ಥಾನ  ತೆರಿಗೆ ಪಾಲು ಪಡೆಯುವಲ್ಲಿ10ನೇ ಸ್ಥಾನ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು,ಫೆಬ್ರವರಿ,12,2024(www.justkannada.in): ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆ ಪಾಲು ಪಡೆಯುವಲ್ಲಿ 10ನೇ ಸ್ಥಾನದಲ್ಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್,  ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ಈ ಹಿನ್ನಲೆಯಲ್ಲಿ ನಮಗೆ ನ್ಯಾಯ ಮತ್ತು ನ್ಯಾಯಯುತವಾಗಿ ಸಿಗಬೇಕಾದ ಪಾಲು ಸಿಗುತ್ತಿಲ್ಲ. ನ್ಯಾಯಯುತ ಪಾಲು  ಪಡೆಯಲು ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.

ರಾಜ್ಯದ 240 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅವುಗಳಲ್ಲಿ 196 ತಡಲೂಕುಗಳನ್ನ ತೀವ್ರ ಬರಪೀಡಿತ ಎಂದು ವರ್ಗೀಕರಿಸಲಾಗಿದೆ. ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕಾರ್ಯಕ್ರಮಗಳನ್ನು ಕೈಗೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಗೆಹ್ಲೋಟ್ ಮಾಹಿತಿ ನೀಡಿದರು.

ಕೇಂದ್ರಕ್ಕೆ ಬರಪರಿಹಾರ ಕೇಳಿದ್ದು ಇನ್ನೂ ಪರಿಹಾರ ಬಿಡುಗಡೆಯಾಗಿಲ್ಲ 18,171 ಕೋಟಿ ರೂ ನೆರವು ಕೇಳಲಾಗಿದೆ. ಈವರೆಗೂ ಕೇಂದ್ರದಿಂದ ಪರಿಹಾರ ಬಂದಿಲ್ಲ ಎಂದರು.

Key words: State -2nd ranks - tax collection – distribution-Thawar Chand Gehlot.

Tags :

.