For the best experience, open
https://m.justkannada.in
on your mobile browser.

ಬೆಂಗಳೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗಮನ.

01:34 PM Nov 28, 2023 IST | prashanth
ಬೆಂಗಳೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗಮನ

ಬೆಂಗಳೂರು,ನವೆಂಬರ್,28,2023(www.justkannada.in): ರಾಜ್ಯರಾಜಧಾನಿ ಬೆಂಗಳೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗಮಿಸಿದ್ದು ಕಾಂಗ್ರೆಸ್ ನಾಯಕರು ಸ್ವಾಗತ ಕೋರಿದರು.

ನಿಗಮ ಮಂಡಳಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಪಾಲ್ಗೊಳ್ಳಲು ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಿದ ರಣದೀಪ್ ಸುರ್ಜೆವಾಲರನ್ನ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು.

ರಣದೀಪ್ ಸಿಂಗ್ ಸುರ್ಜೇವಾಲಾ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮೊದಲ ಹಂತದ ಸಭೆ ನಡೆಸಲಿದ್ದಾರೆ, ಸಭೆಯಲ್ಲಿ ನಿಗಮ ಮಂಡಳಿಗೆ ಪಟ್ಟಿ ಫೈನಲ್ ಮಾಡುವ ಸಾಧ್ಯತೆ ಇದೆ.

Key words: State- Congress- in-charge -Randeep Singh Surjewala- arrives - Bangalore

Tags :

.