ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ದಾಖಲೆ ಪರಿಶೀಲನೆ.
ಬೆಂಗಳೂರು, ಜನವರಿ,9,2024(www.justkannada.in): ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಬಳ್ಳಾರಿಯ ಐದು ಹಾಗೂ ಬೆಂಗಳೂರಿನ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಕುಂದಣ ಪಿಡಿಒ ಪದ್ಮನಾಬ್ ಅವರಿಗೆ ಸೇರಿದ ಮೂರು ಮನೆ ಮೆನಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದರೆ. ಜೊತೆಗೆ ದಾಬಸ್ಪೇಟೆ ಹಾಗೂ ತುಮಕೂರಿನಲ್ಲಿ ಸಹ ಪದ್ಮನಾಬ್ಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಮತ್ತು ಅವರ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ನಾಗರಾಜ್ ಅವರು ಕೂಡ್ಲಿಗಿ ಪಟ್ಟಣ, ಗುಡೇಕೋಟೆ ಗ್ರಾಮದಲ್ಲಿ ಅಕ್ರಮ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ. ಈ ಅಕ್ರಮ ಹಣದಲ್ಲಿ ಪೆಟ್ರೋಲ್ ಬಂಕ್, ಮನೆ, ಜಮೀನು ಖರೀದಿ ಮಾಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು ದಕ್ಷಿಣ ತಾಲೂಕು ಚನ್ನೇನಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸುರೇಶ್ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು ಅದಾದ ಬಳಿಕ ಸ್ನೇಹಿತ ರಮೇಶ್ ಮನೆಯ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Key words: State-wide Lokayukta –attack- Document