ಗ್ಯಾರಂಟಿಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತ: ಸರ್ಕಾರದ ಮೇಲೆ ಸಿದ್ದರಾಮಯ್ಯಗೆ ಹಿಡಿತವಿಲ್ಲ-ಮಾಜಿಸಿಎಂ ಬಿಎಸ್ ವೈ ವಾಗ್ದಾಳಿ.
ಬೆಂಗಳೂರು,ನವೆಂಬರ್,2,2023(www.justkannada.in): ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಸಿಎಂ ಸಿದ್ಧರಾಮಯ್ಯಗೆ ಸರ್ಕಾರದ ಮೇಲೆ ಹಿಡಿತವಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮಗಳ ಜೊತೆ ಮಾತಾನಾಡಿದ ಮಾಜಿ ಸಿಎಂ ಬಿಎಸ್ ವೈ, ಗೃಹಲಕ್ಷ್ಮಿ ಯೋಜನೆ ಎಲ್ಲರಿಗೂ ತಲುಪಿಲ್ಲ. ಗ್ಯಾರಂಟಿಗಳು ರಾಜ್ಯದ ಅಭಿವೃದ್ಧಿಯನ್ನ ಕುಂಠಿತಗೊಳಿಸಿದೆ. ರಾಜ್ಯದಲ್ಲಿ ಮಳೆಯಾಗದೇ ಬರದ ಪರಿಸ್ಥಿತಿ ಉಂಟಾಗಿದ್ದು, ಬರದ ಸ್ಥಿತಿ ನೋಡಲು ಒಬ್ಬಸಚಿವ ಹೋಗಿಲ್ಲ. ಎಸ್.ಸಿ ಮತ್ತು ಎಸ್ ಟಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ. ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದು 5 ತಿಂಗಳಾಗಿದೆ. ಸಿದ್ಧರಾಮಯ್ಯಗೆ ಸರ್ಕಾರದ ಮೇಲೆ ಹಿಡಿತವಿಲ್ಲ ಡಿಕೆ ಶಿವಕುಮಾರ್ ಕಡಿವಾಣ ಹಾಕಲು ಡಿನ್ನರ್ ಮೀಟಿಂಗ್ ನಡೆಸಿದ್ದರು . ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಇಬ್ಬರ ನಡುವಿನ ಗುದ್ದಾಟ ತಾರಕಕ್ಕೇರಿದೆ. ಐಟಿ ದಾಳಿಯಲ್ಲಿ ಹಣ ಸಿಕ್ಕಿದೆ. ವರ್ಗಾವಣೆ ದಂಧೆ ಮಿತಿ ಮೀರಿದೆ ಎಂದು ಬಿಎಸ್ ಯಡಿಯೂರಪ್ಪ ಆರೋಪಿಸಿದರು.
Key words: State's -development -stunted – guarantees-former CM -BSY