For the best experience, open
https://m.justkannada.in
on your mobile browser.

5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳನ್ನ ಮುಂದಿನ ಶೈಕ್ಷಣಿಕ ತರಗತಿಗೆ ಮು೦ದುವರೆಸಲು ಅವಕಾಶ ನೀಡಿ ಸುತ್ತೋಲೆ.

05:55 PM May 20, 2024 IST | prashanth
5  8 ಮತ್ತು 9ನೇ ತರಗತಿ ವಿದ್ಯಾರ್ಥಿಗಳನ್ನ ಮುಂದಿನ ಶೈಕ್ಷಣಿಕ ತರಗತಿಗೆ ಮು೦ದುವರೆಸಲು ಅವಕಾಶ ನೀಡಿ ಸುತ್ತೋಲೆ

ಬೆಂಗಳೂರು,ಮೇ,20,2024 (www.justkannada.in): 5,8 ಮತ್ತು 9ನೇ ತರಗತಿ ಫಲಿತಾಂಶವನ್ನ ಪ್ರಕಟಿಸಲು ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ್ದು ಅಂತಿಮ ತೀರ್ಪು ಬಾಕಿ ಇರುವ ಹಿನ್ನೆಲೆ,  ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಮುಂದಿನ ಶೈಕ್ಷಣಿಕ ತರಗತಿಗೆ ದಾಖಲಿಸಲು ಅವಕಾಶ ನೀಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA -2 ಮೌಲ್ಯಾಂಕನ ಕಾರ್ಯ ಮುಗಿದಿದ್ದು ಉಲ್ಲೇಖ-2ರಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಾ೦ಕ: 08-04-2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿರುತ್ತದೆ. ತದನಂತರದಲ್ಲಿ ಫಲಿತಾಂಶವನ್ನು ಪ್ರಕಟಿಸಲು ಘನ ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ದು. ಅಂತಿಮ ತೀರ್ಪು ಬಾಕಿ ಇರುತ್ತದೆ.

ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದು , ದಿನಾ೦ಕ: 29-05-2024 ರಿ೦ದ 2024- 25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರ೦ಭವಾಗಲಿದೆ. 2023-24ನೇ ಸಾಲಿನಲ್ಲಿ ವ್ಯಾಸ೦ಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇರುವುದರಿಂದ ಅವರನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ/ತರಗತಿಗೆ ಶಾಲಾ ಪ್ರವೇಶ/ದಾಖಲಾತಿ ಮಾಡಲು, ಪ್ರವೇಶ ಶುಲ್ಕ ಪಾವತಿಸಲು ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆ ಹೊಂದಿರುವ ಪ್ರಯುಕ್ತ ಮಕ್ಕಳ ವರ್ಗಾವಣೆ ಪ್ರಮಾಣಪತ್ರ, ಪ್ರಗತಿ ಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರಗಳನ್ನು ವಿತರಿಸಲು  ಸಾಧ್ಯವಾಗದ ಹಿನ್ನಲೆಯಲ್ಲಿ ಉಲ್ಲೇಖ-3ರನ್ವಯ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಕ್ರಮ ವಹಿಸುವಂತೆ ಕೋರಿರುತ್ತಾರೆ. ಅದರಂತೆ ಮಕ್ಕಳ ಶೈಕ್ಷಣಿಕ ಭವಿಷ್ಯ ಸುಗಮಗೊಳಿಸಲು ಈ ಕೆಳಕ೦ಡಂತೆ ಕ್ರಮವಹಿಸುವುದು.

ಘನ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 8142/2024, 8136/2024 ಮತ್ತು 8127/2024ರ ಮಧ್ಯಂತರ ತೀರ್ಪಿನಂತೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆಹಿಡಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA-1,  FA-2, FA-3, FA-4 ಮತ್ತು SA-1 ಗಳ ಮೌಲ್ಯಾಂಕನದ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ಮು೦ದುವರೆಸಲು ಅವಕಾಶ ಕಲ್ಪಿಸಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Key words: students, allowed, continue, academic class

Tags :

.