HomeBreaking NewsLatest NewsPoliticsSportsCrimeCinema

NEET-UG ಕೌನ್ಸಿಲಿಂಗ್ ಗೆ ತಡೆ ನೀಡಲು ಸುಪ್ರೀಂಕೋರ್ಟ್ ಮತ್ತೆ ನಕಾರ

01:33 PM Jun 21, 2024 IST | prashanth

ನವದೆಹಲಿ,ಜೂನ್,21,2024 (www.justkannada.in) : ದೇಶದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ನೀಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮ ಸಂಬಂಧ  ನೀಟ್-ಯುಜಿ ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ ನೀಡಲು ಸುಪ್ರೀಂ ಕೋರ್ಟ್  ಮತ್ತೆ ನಿರಾಕರಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ನೀಟ್-ಯುಜಿ ಪರೀಕ್ಷೆಯ ತನಿಖೆ, ರದ್ದತಿ ಮತ್ತು ಮರುಪರೀಕ್ಷೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಪೀಠ, ನೀಟ್-ಯುಜಿ 2024 ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ ನೀಡಲು  ಮತ್ತೆ ನಿರಾಕರಿಸಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್ ನೀಡಿದೆ.  ಹೊಸ ಅರ್ಜಿಗಳನ್ನು ಬಾಕಿ ಇರುವ ಅರ್ಜಿಗಳೊಂದಿಗೆ ಟ್ಯಾಗ್ ಮಾಡಿ ಜುಲೈ 8 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.

ಅಖಿಲ ಭಾರತ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ನಡೆಸುವಲ್ಲಿನ ಅಕ್ರಮಗಳ ಬಗ್ಗೆ ಹೆಚ್ಚುತ್ತಿರುವ ಆಕ್ರೋಶದ ಮಧ್ಯೆ, ನೀಟ್-ಯುಜಿ 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಮತ್ತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಮತ್ತು ಇತರರಿಂದ ಪ್ರತಿಕ್ರಿಯೆಗಳನ್ನು ಕೋರಿತ್ತು.

Key words: Supreme Court, refuses, stay NEET, UG, counselling

Tags :
Supreme Court - refuses - stay NEET-UG -counselling
Next Article