ಸುಪ್ರೀಂಕೋರ್ಟ್ ನ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ನಿಧನ.
11:08 AM Feb 21, 2024 IST
|
prashanth
ನವದೆಹಲಿ,ಫೆಬ್ರವರಿ,21,2024(www.justkannada.in): ಸುಪ್ರೀಂಕೋರ್ಟ್ ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್(95) ನಿಧನರಾಗಿದ್ದಾರೆ.
ನಿನ್ನೆ ರಾತ್ರಿ ದೆಹಲಿಯಲ್ಲಿ ಫಾಲಿ ಎಸ್. ನಾರಿಮನ್ ಕೊನೆಯುಸಿರೆಳೆದಿದ್ದಾರೆ. ನಾರಿಮನ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ನಾರಿಮನ್ ಅವರು ಕಾವೇರಿ ನೀರಿನ ವಿಚಾರದಲ್ಲಿ ನಾರಿಮನ್ ಅವರು ಕರ್ನಾಟಕ ಪರ ವಾದ ಮಂಡಿಸಿದ್ದರು.
ಅವರು 1971 ರಿಂದ ಸುಪ್ರೀಂ ಕೋರ್ಟ್ ವಕೀಲರಾಗಿದ್ದರು. ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ದೇಶವು ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಿದೆ. ಅವರು 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು. ಅವರು ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
Key words: Supreme Court- Senior Advocate- Fali S. Nariman- passed away
Next Article