ಅ.1ರವರೆಗೆ ದೇಶಾದ್ಯಂತ ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ
03:26 PM Sep 17, 2024 IST
|
prashanth
ನವದೆಹಲಿ,ಸೆಪ್ಟಂಬರ್,17,2024 (www.justkannada.in): ಅಕ್ಟೋಬರ್ 1ರವರೆಗೆ ದೇಶಾದ್ಯಂತ ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ದಂಡನಾತ್ಮಕ ಕ್ರಮವಾಗಿ ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳ ಕಟ್ಟಡಗಳನ್ನು ನೆಲಸಮಗೊಳಿಸುವಲ್ಲಿ ವಿವಿಧ ರಾಜ್ಯ ಸರ್ಕಾರಗಳ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ನ್ಯಾಯಪೀಠವು ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಿದೆ.
ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು, ರೈಲ್ವೆ ಮಾರ್ಗಗಳು, ಜಲಮೂಲಗಳ ಅತಿಕ್ರಮಣಗಳಿಗೆ ಈ ತಡೆಯಾಜ್ಞೆ ಅನ್ವಯಿಸುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ. ಅಕ್ಟೋಬರ್ 1ರಂದು ಮುಂದಿನ ವಿಚಾರಣೆಯ ದಿನಾಂಕದವರೆಗೆ ತಡೆಯಾಜ್ಞೆ ಜಾರಿಯಲ್ಲಿರುತ್ತದೆ. ಈ ಮೂಲಕ ಉತ್ತರ ಪ್ರದೇಶದ ಯೋಗಿ ಸರ್ಕಾರದ ಬುಲ್ಡೋಜರ್ ಅಸ್ತ್ರಕ್ಕೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.
Key words: Supreme Court, stays, bulldozer operation
Next Article