HomeBreaking NewsLatest NewsPoliticsSportsCrimeCinema

ಬೆಂಗಳೂರು ಏರ್ ಪೋರ್ಟ್ ನಲ್ಲಿ ಶಂಕಿತ ಉಗ್ರನ ಬಂಧನ

01:22 PM Aug 31, 2024 IST | prashanth

ಬೆಂಗಳೂರು, ಆಗಸ್ಟ್​​ 31,2024 (www.justkannada.in):  ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ(NIA) ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.

ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ಎನ್ ಐಎ ಅಧಿಕಾರಿಗಳು ನಿನ್ನೆಯೇ ಅಜೀಜ್ ಅಹ್ಮದ್ ನನ್ನು ಬಂಧಿಸಿ ಕರೆದೊಯ್ದಿದ್ದಾರೆ . ತಮಿಳುನಾಡಿನ ಹಿಜ್ಬುತ್ ಥರೀರ್ ಪ್ರಕರಣದ ಆರೋಪಿ ಅಜೀಜ್ ಅಹ್ಮದ್  ಹಿಜ್ಬ್ ಉಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯವನಾಗಿದ್ದು,  ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದನು.

ಈ ಮಾಹಿತಿಯನ್ನು ಇಮಿಗ್ರೇಷನ್ ಅಧಿಕಾರಿಗಳು ಎನ್​ಐಎಗೆ ನೀಡಿದ್ದಾರೆ. ಮಾಹಿತಿ ಆಧರಿಸಿ ಕೂಡಲೆ ಸ್ಥಳಕ್ಕೆ ತೆರಳಿದ ಎನ್‌ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್​ ಅಹ್ಮದ್​​ನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Suspected, terrorist, arrested, Bangalore Airport

Tags :
arrestedBangalore- airportSuspectedterrorist
Next Article