HomeBreaking NewsLatest NewsPoliticsSportsCrimeCinema

ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದ್ರೋ ಅಥವಾ ಡಿಕೆಶಿ ಹೇಳಿಸಿದ್ರೋ ಗೊತ್ತಿಲ್ಲ- ಆರ್.ಅಶೋಕ್

06:09 PM Jun 27, 2024 IST | prashanth

ಬೆಂಗಳೂರು, ಜೂನ್​ 27,2024 (www.justkannada.in): ಡಿಕೆ ಶಿವಕುಮಾರ್ ​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ವಿಧಾನಸಭೆ ವಿಪಕ್ಷ ನಾಯಕ ಆರ್,ಅಶೋಕ್,  ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದ್ರೋ ಅಥವಾ ಡಿಕೆಶಿ ಹೇಳಿಸಿದ್ರೋ ಗೊತ್ತಿಲ್ಲ ಎಂದು ಟೀಕಿಸಿದರು.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಹೇಳಿಸಿದರೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ರಾಜಕೀಯದ ಒಳಗೆ ಹೋಗಿ ತಿಳಿದುಕೊಳ್ಳುವ ಸಾಮರ್ಥ್ಯ ಇದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಎಂದು ಆಗಿರಲಿಲ್ಲ. ಮೊದಲ ಬಾರಿಗೆ ಸಿಎಂ ಎದುರಿಗೆ ನೀವು ರಾಜೀನಾಮೆ ನೀಡಿ ಎಂದಿದ್ದಾರೆ.  ಹೀಗಾಗಿ ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಿ. ಇಷ್ಟು ಅವಮಾನ ಆಗಿಯೂ ಸಿಎಂ ಆಗಿ ಮುಂದುವರಿಯಬಾರದು ಎಂದು ವಾಗ್ದಾಳಿ ನಡೆಸಿದರು.

ಡಿಕೆ ಶಿವಕುಮಾರ್​ ಗೆ ಅವರ ತಮ್ಮನ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇದು  ಸಿದ್ದರಾಮಯ್ಯ ತಂತ್ರಕ್ಕೆ ಇದೊಂದು ಪ್ರತಿತಂತ್ರ ಅಷ್ಟೇ. ಮೂರು ಡಿಸಿಎಂಗಳಿಗೆ ಹಿನ್ನೆಲೆ ಗಾಯಕರೇ ಸಿದ್ದರಾಮಯ್ಯ ಎಂದು ಆರ್.ಅಶೋಕ್ ಹೇಳಿದರು.

Key words:  Swamiji –DK Shivakumar-CM-Position-R.Ashok

Tags :
CMpositionR.ashokSwamiji –DK Shivakumar
Next Article