HomeBreaking NewsLatest NewsPoliticsSportsCrimeCinema

ಟಿ-20 ವಿಶ್ವಕಪ್: ಸ್ಕಾಟ್ಲೆಂಡ್- ಐರ್ಲೆಂಡ್ ಪ್ರಾಯೋಜಕತ್ವ ಪಡೆದ ‘ನಂದಿನಿ’, 'ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ' ಎಂದ ಸಿಎಂ ಸಿದ್ದರಾಮಯ್ಯ

02:21 PM May 16, 2024 IST | prashanth

ಬೆಂಗಳೂರು, ಮೇ 16, 2024 (www.justkannada.in): ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ.

ಹೌದು.ಈಗಾಗಲೇ ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ.

ಈ ಮೂಲಕ ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್‌ನಲ್ಲಿ ‘ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ’ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Tags :
'Nandini' sponsored by Scotland-IrelandNandini sponsored by Scotland and IrelandT-20 World CupT-20 World Cup: 'Nandini' sponsored by Scotland-Ireland
Next Article