HomeBreaking NewsLatest NewsPoliticsSportsCrimeCinema

ತಮಿಳು ನಟ ದಳಪತಿ ವಿಜಯ್ ರಾಜಕೀಯ ಎಂಟ್ರಿ: ಹೊಸ ಪಕ್ಷ ಘೋಷಣೆ.

03:43 PM Feb 02, 2024 IST | prashanth

ಚೆನ್ನೈ,ಫೆಬ್ರವರಿ,2,2024(www.justkannada.in):  ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದು ಹೊಸ ಪಕ್ಷ ಘೋಷಣೆ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಈ ವೇಳೆಯೇ ತಮಿಳು ಚಿತ್ರರಂಗದ ನಟ ವಿಜಯ್ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು 'ತಮಿಳಗ ವೆಟ್ರಿ ಕಳಗಂ' ಎಂಬ ನೂತನ ಪಕ್ಷವನ್ನ ಘೋಷಣೆ ಮಾಡಿದ್ದಾರೆ.

ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷದ ರಚನೆಗೆ ಒಪ್ಪಿಗೆ ನೀಡಿದ ಬಳಿಕ ಇಂದು ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ.

ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ನಟ ವಿಜಯ್, ನಮ್ಮ ಪಕ್ಷ 'ತಮಿಳಗ ವೆಟ್ರಿ ಕಳಗಂ' ನ್ನು ನೋಂದಾಯಿಸಲು ಚುನಾವಣಾ ಆಯೋಗಕ್ಕೆ ಇಂದು ಅರ್ಜಿ ಸಲ್ಲಿಸುತ್ತಿದ್ದೇವೆ. ಮುಂಬರುವ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಮತ್ತು ಮೂಲಭೂತ ರಾಜಕೀಯ ಬದಲಾವಣೆ ತರುವುದು ನಮ್ಮ ಗುರಿಯಾಗಿದೆ ಎಂದಿದ್ದಾರೆ.

ಅದೇ ರೀತಿ ನಾವು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ವಿಜಯ್ ತಿಳಿಸಿದ್ದಾರೆ.

Key words: Tamil actor -Dalapathy Vijay- political -entry

Tags :
Tamil actor -Dalapathy Vijay- political -entry
Next Article