HomeBreaking NewsLatest NewsPoliticsSportsCrimeCinema

ನಿಂತಿದ್ದ ಲಾರಿಗೆ ಟಾಟಾ ಸುಮೊ ಡಿಕ್ಕಿ: 12 ಮಂದಿ ದುರ್ಮರಣ.

10:10 AM Oct 26, 2023 IST | prashanth

ಚಿಕ್ಕಬಳ್ಳಾಫುರ,ಅಕ್ಟೋಬರ್,26,2023(www.justkannada.in): ನಿಂತಿದ್ದ ಲಾರಿ ಹಾಗೂ ಟಾಟಾ ಸುಮೊ ಡಿಕ್ಕಿಯಾಗಿ 12 ಮಂದಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ  ಹೊರವೊಲಯದಲ್ಲಿ ಚಿತ್ರಾವತಿ ಬಳಿಯ ಸಂಚಾರ ಠಾಣೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೊ ಡಿಕ್ಕಿ ಹೊಡೆದಿದ್ದು,  ಪರಿಣಾಮ ಟಾಟಾ ಸುಮೊದಲ್ಲಿದ್ದ 12 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಟಾಟಾ ಸುಮೊ ಬಾಗೇಪಲ್ಲಿಯಿಂದ ಬೆಂಗಳೂರು ಕಡೆ ಹೋಗುತ್ತಿತ್ತು. ಆದರೆ, ದಟ್ಟ ಮಂಜು ಇದ್ದ ಕಾರಣ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆಬಂದಿ ನಿಂತಿದ್ದ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಟಾಟಾ ಸುಮೊ ಮುಂದಿನ ಭಾಗ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಒಟ್ಟು 12 ಜನ ಸಾವನ್ನಪ್ಪಿದ್ದಾರೆ. ಮೃತರು ಆಂಧ್ರದ ಮೂಲದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Key words: Tata Sumo -collides – lorry- 12 death

 

Tags :
Tata Sumo -collides – lorry- 12 death
Next Article