HomeBreaking NewsLatest NewsPoliticsSportsCrimeCinema

ಸುಪ್ರೀಂಕೋರ್ಟ್​ ನಲ್ಲಿ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್​​.

01:02 PM Feb 19, 2024 IST | prashanth

ನವದೆಹಲಿ, ಫೆಬ್ರವರಿ,19,2024(www.justkannada.in):  ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣ ಸಂಬಂಧ ಹೈಕೋರ್ಟ್ ವಿಧಿಸಿದ್ದ 10 ಸಾವಿರ ದಂಡದ ಆದೇಶ ಪ್ರಶ್ನಿಸಿ ಹಾಗೂ ಎಫ್ ಐಆರ್ ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಪ್ರತಿಭಟನೆಯಲ್ಲಿ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್ ವಿಧಿಸಿರುವ 10 ಸಾವಿರ ರೂ. ದಂಡವನ್ನು ಪ್ರಶ್ನಿಸಿ ಮತ್ತು ಎಫ್​ಐಆರ್​​ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್  ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿದ್ದು,  ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ಈ ಮೂಲಕ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.  ಆದರೆ, ಆರು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಸೂಚನೆ ನೀಡಿದೆ.

ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧದ  ಎಫ್​ ಐಆರ್ ರದ್ದು ಮಾಡಬೇಕೆಂದು ಕೋರಿ ಸುಪ್ರೀಂ ಕೋರ್ಟ್​​ನಲ್ಲಿ  ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿರುವುದನ್ನು ಕೂಡ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಕಾಂಗ್ರೆಸ್ ನಾಯಕರ ಪರ ಅಭಿಷೇಕ್ ಮನುಸಿಂಘ್ವಿ ವಾದ ಮಂಡನೆ ಮಾಡಿದರು.

Key words: Temporary relief – CM- Siddaramaiah -Supreme Court.

Tags :
Supreme CourtTemporary relief – CM- Siddaramaiah
Next Article