ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ.
12:27 PM Dec 07, 2023 IST
|
prashanth
ರಾಯಚೂರು,ಡಿಸೆಂಬರ್,7,2023(www.justkannada.in): ಲಾರಿ ಮತ್ತು ಟಾಟಾ ಏಸ್ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ನಡೆದಿದೆ.
ಇಸ್ಮಾಯಿಲ್ (25), ಚನ್ನಭಸವ(26), ಅಂಬರೀಶ್(20), ರವಿ(21). ಓರ್ವನ ಸ್ಥಿತಿ ಗಂಭೀರವಾಗಿದ್ದು, ಮೃತದೇಹಗಳನ್ನ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವೇಗವಾಗಿ ಬಂದ ಟಾಟಾ ಏಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಟಾಟಾ ಏಸ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಸಿಂಧನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: Terrible- accident- Four died -on the spot.
Next Article