ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು.
10:50 AM Jan 02, 2024 IST
|
prashanth
ಮೈಸೂರು,ಜನವರಿ,2,2024(www.justkannada.in): ಕೆ ಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ.
ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಸಾವನ್ನಪ್ಪಿದವರು ಕೂಲಿ ಕಾರ್ಮಿಕರು ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಜೀಪ್ ಹೆಚ್ ಡಿ ಕೋಟೆಯಿಂದ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹುಣಸೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: Terrible -accident -government bus – jeep-Three died -mysore
Next Article