ಭೀಕರ ರಸ್ತೆ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು.
06:09 PM Feb 22, 2024 IST
|
prashanth
ಬೆಳಗಾವಿ,ಫೆಬ್ರವರಿ,22,2024(www.justkannada.in): ಮದುವೆ ಮುಗಿಸಿಕೊಂಡು ವಾಪಸ್ ಹೋಗುತ್ತಿದ್ದ ವೇಳೆ ಕಾರು ಮರಕ್ಕೆ ಹೊಡೆದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆ ಖಾನಾಪುರದ ನಂಧಗಡ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರು ಮಹಾರಾಷ್ಟ್ರ ಮೂಲದವರು ಎನ್ನಲಾಗುತ್ತಿದೆ. ಕಾರಿನಲ್ಲಿದ್ದವರು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ಊರಿನ ವಾಪಸ್ ಆಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.
ಕಾರಿನಲ್ಲಿ ಒಂಬತ್ತು ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದ್ದು, ಘಟನ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Key words: Terrible- road –accident- 6 died- on the spot-belagaum
Next Article