HomeBreaking NewsLatest NewsPoliticsSportsCrimeCinema

ಹೊಸ ವರ್ಷ ಸಂಭ್ರಮಾಚರಣೆಗೆ ಸೂಕ್ತ ಬಿಗಿ ಭದ್ರತೆ: ಅಹಿತಕರ ಘಟನೆ ನಡೆಯದಂತೆ ಕ್ರಮ- ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್.

12:16 PM Dec 26, 2023 IST | prashanth

ಬೆಂಗಳೂರು,ಡಿಸೆಂಬರ್,26,2023(www.justkannada.in): ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಅಂದು ಡಿಸೆಂಬರ್ 31ರ ರಾತ್ರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಜೋರಾಗಿರಲಿದೆ. ಈ ಹಿನ್ನೆಲೆಯಲ್ಲಿ ಈ ವೇಳೆ ಕೈಗೊಳ್ಳಲಾಗುವ ಕ್ರಮಗಳ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೊಲೀಸ್ ಆಯುಕ್ತ ಬಿ.ದಯಾನಂದ್, ಹೊಸ ವರ್ಷ ಸಂಭ್ರಮಾಚರಣೆಗೆ ಸೂಕ್ತ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗುತ್ತದೆ. ಹೊಸವರ್ಷ ಸಂಭ್ರಮಾಚರಣೆ ವೇಳೆ ಮಹಿಳೆಯರಿಗೆ ಕಿರುಕುಳ ತೊಂದರೆ ಕೊಡಬಾರದು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು. ಮುನ್ನೆಚ್ಚರಿಕೆ ವಹಿಸಲಾಗುವುದು. ಕುಡಿದು ವಾಹನ ಚಾಲನೆ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ.  ನಗರದಲ್ಲಿ ಹೆಚ್ಚು ಸಿಸಿ ಟಿವಿ ಅಳವಡಿಕೆ ಮಾಡಲಾಗುತ್ತದೆ.  ಎಂ.ಜಿ ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಹೆಚ್ಚಿನ ಭದ್ರತೆ ನೀಡಲಾಗುತ್ತದೆ ಎಂದು ತಿಳಿಸಿದರು.

ವೀಲಿಂಗ್, ಡ್ರಾಗ್ ರೇಸ್  ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ.  ಡಿಸೆಂಬರ್ 31ರ ರಾತ್ರಿ 11 ಗಂಟೆಗೆ  ಫ್ಲೈ ಓವರ್ ಸಂಚಾರ ಬಂದ್ ಆಗಲಿದ್ದು,   ಏರ್ ಪೋರ್ಟ್ ರಸ್ತೆ ಫ್ಲೈ ಓವರ್ ಮಾತ್ರ ಓಪನ್  ಇರಲಿದೆ ಎಂದು ತಿಳಿಸಿದರು.

ನಗರದೆಲ್ಲೆಡೆ ಸಿಸಿಟಿವಿ ಅಳವಡಿಸಿ ಅಹಿತಕರ ಘಟನೆ ತಡೆಯಲಾಗುತ್ತದೆ. ಪಬ್, ಮಾಲ್, ಕ್ಲಬ್ ಗಳಿಗೆ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ ನೀಡಲಾಗುತ್ತದೆ.

ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ ಮಾಡಲಾಗುತ್ತದೆ. ಇದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಬಹುದು. ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಲಿದೆ. ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಇರಲಿದ್ದು,  ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ ಮಾಡಲಾಗುತ್ತದೆ. ಬಾರ್, ಪಬ್ ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್ ಗೆ ಸೂಚನೆ ನೀಡಿಲಾಗಿದ್ದು ನಿಗದಿತ ಸಮಯ ಮೀರದಂತೆ ತಿಳಿಸಲಾಗಿದೆ.

ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧವಿದ್ದು, ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ ವ್ಯವಸ್ಥೆ ಇದೆ. ಇದರಿಂದ ಮನೆಗೆ ಹೋಗಲು ಅನುಕೂಲವಾಗುತ್ತದೆ..ರಾತ್ರಿ 1 ಗಂಟೆ ತನಕ ನಮ್ಮ ಮೆಟ್ರೋ ಸಂಚಾರ ವ್ಯವಸ್ಥೆ ಇರಲಿದೆ ಎಂದು ಬಿ.ದಯಾನಂದ್ ತಿಳಿಸಿದ್ದಾರೆ.

Key words: tight security - New Year- celebrations-Bengaluru Police Commissioner -B. Dayanand.

Tags :
B. Dayanand.tight security - New Year- celebrations-Bengaluru Police Commissioner
Next Article