HomeBreaking NewsLatest NewsPoliticsSportsCrimeCinema

ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಇಬ್ಬರು ಸಾವು.

05:09 PM Feb 06, 2024 IST | prashanth
featuredImage featuredImage

ಚಿತ್ರದುರ್ಗ, ಫೆಬ್ರವರಿ,6,2024(www.justkannada.in):  ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ  ಈ ಘಟನೆ ನಡೆದಿದೆ.  ಮುತ್ತುಸ್ವಾಮಿ(69) ಹಾಗೂ ಪಾಂಡುರಂಗ(32) ಮೃತಪಟ್ಟವರು. ಘಟನೆಯಲ್ಲಿ ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ದಾವಣಗೆರೆಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Tire-burst -car –overturned- Two –death

Tags :
burstcardeathoverturnedtireTwo