HomeBreaking NewsLatest NewsPoliticsSportsCrimeCinema

ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ ಹೇಳಿಕೆಗೂ ನಮ್ಮ ನಂದಿನಿ ಬ್ರ್ಯಾಂಡ್ ​ಗೂ ಸಂಬಂಧವಿಲ್ಲ- ಭೀಮಾ ನಾಯ್ಕ್

04:14 PM Sep 19, 2024 IST | prashanth

ಬೆಂಗಳೂರು, ಸೆಪ್ಟೆಂಬರ್​ 19,2024 (www.justkannada.in):  ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬ ಬಳಸಲಾಗುತ್ತದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿರುವ ಕುರಿತು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್  ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಭೀಮಾನಾಯ್ಕ್, ಅವರ ಹೇಳಿಕೆಗೂ, ನಮ್ಮ ನಂದಿನಿ ಬ್ರ್ಯಾಂಡ್​ಗೂ ಸಂಬಂಧವಿಲ್ಲ. ಕಳೆದ 4 ವರ್ಷಗಳಿಂದ ನಂದಿನಿ ತುಪ್ಪ‌ ಅಲ್ಲಿಗೆ ಹೋಗಿಲ್ಲ. ಈಗ ನಂದಿನಿ ತುಪ್ಪ ತಿರುಪತಿಗೆ ಸರಬರಾಜು ಮಾಡಲು ಶುರು ಮಾಡಿದ್ದೇವೆ. 2013-18ರ ಅವಧಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 3 ರಿಂದ 4 ಮೆಟ್ರಿಕ್‌ ಟನ್ ತುಪ್ಪ ಸರಬರಾಜು ಮಾಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

ಟಿಟಿಡಿ ಹೊಸ ಅಧ್ಯಕ್ಷರು, ನಿರ್ದೇಶಕರೆಲ್ಲ‌ ಸೇರಿ ನಂದಿನಿ ತುಪ್ಪ ಬೇಕು ಅಂತ ಮೇಲ್ ಮಾಡಿದ್ದರು. ಈ ಬಾರಿ ಟೆಂಡರ್​ ನಲ್ಲಿ ಭಾಗವಹಿಸಲು ಹೇಳಿದ್ದರು. ಹೀಗಾಗಿ‌ 3 ಲಕ್ಷದ 50 ಸಾವಿರ ಕೆ.ಜಿ‌ ತುಪ್ಪವನ್ನ ಟೆಂಡರ್ ತೆಗೆದುಕೊಂಡಿದ್ದೇವೆ. ಮೊದಲ ಹಂತದಲ್ಲಿ‌ 350 ಮೆಟ್ರಿಕ್ ಟನ್ ತುಪ್ಪವನ್ನ ಕಳೆದ ವಾರ ಸರಬರಾಜು ಮಾಡಿದ್ದೇವೆ ಎಂದು ಭೀಮನಾಯ್ಕ್ ತಿಳಿಸಿದ್ದಾರೆ.

 

Key words: Tirupati Laddu, Animal fat,  Bhima Naik

Tags :
animal fatBhima Naiktirupati Laddu
Next Article