ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ.
04:10 PM Dec 08, 2023 IST
|
prashanth
ನವದೆಹಲಿ,ಡಿಸೆಂಬರ್,8,2023(www.justkannada.in): ಸಂಸತ್ ನಲ್ಲಿ ಪ್ರಶ್ನೆ ಕೇಳಲು ಲಂಚ ಕೇಳಿದ ಆರೋಪಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರನ್ನ ಸ್ಪೀಕರ್ ಓಂ ಬಿರ್ಲಾ ಅವರು ಲೋಕಸಭೆಯಿಂದ ಉಚ್ಚಾಟನೆ ಮಾಡಿದ್ದಾರೆ.
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನ ಉಚ್ಚಾಟಿಸಲು ಶಿಫಾರಸು ಮಾಡಿದ ವರದಿಯನ್ನ ಲೋಕಸಭಾ ನೈತಿಕ ಸಮಿತಿ ಮಂಡಿಸಿತು. ನೈತಿಕ ಸಮಿತಿ ವರದಿ ಮಂಡಿಸಿದ ಬೆನ್ನಲ್ಲೇ ಮಹುವಾ ಮೊಯಿತ್ರಾ ಅವರನ್ನು ಸ್ಪೀಕರ್ ಓಂ ಬಿರ್ಲಾ ಅವರು ಉಚ್ಛಾಟನೆ ಮಾಡಿದ್ದಾರೆ.
ಕೇಂದ್ರ ಸರ್ಕಾರ ಕೂಡ ಮಹುವಾ ಕುರಿತು ನೈತಿಕ ಸಮಿತಿ ವರದಿ ಶಿಫಾರಸ್ಸನ್ನು ಬೆಂಬಲಿಸಿ ಇಂದು ಲೋಕಸಭೆಯಲ್ಲಿ ತನ್ನ ನಿರ್ಣಯ ಮಂಡಿಸಿತು. ಸ್ಪೀಕರ್ ಓಂ ಬಿರ್ಲಾ ಅವರು ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ಅವರನ್ನು ಸಂಸತ್ತಿನಿಂದ ಉಚ್ಛಾಟಿಸಿ ಸದನವನ್ನು ಡಿಸೆಂಬರ್ 11ಕ್ಕೆ ಮುಂದೂಡಿದ್ದಾರೆ.
Key words: TMC MP- Mahua Moitra -expelled - Lok Sabha.
Next Article