For the best experience, open
https://m.justkannada.in
on your mobile browser.

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವು.

10:55 AM Jan 19, 2024 IST | prashanth
ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವು

ಆನೇಕಲ್, ಜನವರಿ 19,2024(www.justkannada.in): ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ. ಜಾರ್ಖಂಡ್​​ ಮೂಲದ ಮಿನರ್​ ಬಿಸ್ವಾಸ್​​, ಶಾಹೀದ್​ ಮೃತಪಟ್ಟವರು. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗಾಯಾಳುಗಳ ಪೈಕಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Key words: Two people –death- construction -school- building -collapsed.

Tags :

.