For the best experience, open
https://m.justkannada.in
on your mobile browser.

ಕೇಂದ್ರ ಬಜೆಟ್: ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆ  

03:07 PM Jul 23, 2024 IST | prashanth
ಕೇಂದ್ರ ಬಜೆಟ್  ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಬಂಪರ್ ಕೊಡುಗೆ  

ನವದೆಹಲಿ,ಜುಲೈ,23,2024 (www.justkannada.in): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ ಬಜೆಟ್‌ ನಲ್ಲಿ ಎನ್ ಡಿಎ ಮಿತ್ರಪಕ್ಷಗಳ ನಾಯಕರ ರಾಜ್ಯಗಳಾದ ಬಿಹಾರ ಹಾಗೂ ಆಂಧ್ರಪ್ರದೇಶಗಳಿಗೆ ಬಂಪರ್‌ ಕೊಡುಗೆಗಳನ್ನು ನೀಡಿದ್ದಾರೆ.

ಇಂದು ಲೋಕಸಭೆಯಲ್ಲಿ ಎನ್ ಡಿಎ ಮೈತ್ರಿಕೂಟದ ಮೂರನೇ ಅವಧಿಯ  ಬಜೆಟ್  ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು. ಆಂಧ್ರಪ್ರದೇಶವು ತನ್ನ ರಾಜಧಾನಿಯನ್ನು ಅಭಿವೃದ್ಧಿಪಡಿಸಲು 15,000 ಕೋಟಿ ರೂ.ಗಳ ಬೆಂಬಲವನ್ನು ಪಡೆಯಲಿದೆ.  "ಆಂಧ್ರಪ್ರದೇಶದ ರಾಜಧಾನಿಯ ಅಭಿವೃದ್ಧಿಗೆ ಈ ಹಣಕಾಸು ವರ್ಷ ಮತ್ತು ಮುಂದಿನ ವರ್ಷಗಳಲ್ಲಿ ಸರ್ಕಾರ 15,000 ಕೋಟಿ ರೂ.ಗಳನ್ನು ವ್ಯವಸ್ಥೆ ಮಾಡಲಿದೆ" ಎಂದು ತಿಳಿಸಿದ್ದಾರೆ .

ವಿಶಾಖಪಟ್ಟಣ ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದರು. 26 ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳ ಆರಂಭ, , ಆಂಧ್ರಪ್ರದೇಶ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಹಾಗೆಯೇ ಬಿಹಾರ ರಾಜ್ಯಕ್ಕೂ ಬಂಪರ್ ಘೋಷಣೆ ಮಾಡಿರುವ ನಿರ್ಮಲಾ ಸೀತಾರಾಮನ್,  ಬಿಹಾರಕ್ಕೆ ಹೊಸ ವಿಮಾನ ನಿಲ್ದಾಣಗಳು, ವೈದ್ಯಕೀಯ ಸೌಲಭ್ಯಗಳು ಮತ್ತು ಕ್ರೀಡಾ ಸೌಕರ್ಯಗಳನ್ನು ಒದಗಿಸಲಾಗುವುದು. ರಾಜ್ಯದ ಹೆದ್ದಾರಿಗಳ ಅಭಿವೃದ್ಧಿಗಾಗಿ ಹೆಚ್ಚುವರಿಯಾಗಿ 26 ಸಾವಿರ ಕೋಟಿ ರೂ ಹಂಚಿಕೆ ಮಾಡಲಾಗುವುದು ಎಂದಿದ್ದಾರೆ.

ಪೂರ್ವ ಭಾಗದ ಕೈಗಾರಿಕಾ ಕಾರಿಡಾರ್‌ ನ ಅಭಿವೃದ್ಧಿಗೆ ಸರ್ಕಾರ ನೆರವು ನೀಡಲಿದೆ. ಬೋಧಗಯಾ- ರಾಜಗಿರ್- ವೈಶಾಲಿ- ದರ್ಬಾಂಗಾ ಸ್ಪರ್ಸ್, ಪಾಟ್ನಾ- ಪುರ್ನ್ಯಾ ಎಕ್ಸ್‌ಪ್ರೆಸ್‌ವೇ, ಬಕ್ಸರ್- ಬಾಗಲ್ಪುರ ಎಕ್ಸ್‌ಪ್ರೆಸ್‌ವೇ ನಿರ್ಮಾಣ ನಡೆಯಲಿದೆ ಬಿಹಾರದಲ್ಲಿ ಮಳೆಯಿಂದ ಪ್ರವಾಹ ತಡೆಗೆ ಹಾಗೂ ನೀರಾವರಿಗೆ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಪ್ರವಾಹಪೀಡಿತ ಬಿಹಾರಕ್ಕೆ 11,500 ಕೋಟಿ ರೂ ನೆರವು. ಬೋಧಗಯಾದಲ್ಲಿ ಮಹಾಬೋಧಿ ದೇವಸ್ಥಾನ ಕಾರಿಡಾರ್ ಮೂಲಕ ಪ್ರವಾಸೋದ್ಯಮದ ಅಭಿವೃದ್ಧಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಸಿಎಂ,  ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಹಾಗೂ ಬಿಹಾರದ ಜೆಡಿಯು ಬಿಜೆಪಿಯ ಪ್ರಮುಖ ಮಿತ್ರ ಪಕ್ಷವಾಗಿದೆ.

Key words: Union Budget, contribution, Andhra Pradesh, Bihar

Tags :

.