For the best experience, open
https://m.justkannada.in
on your mobile browser.

ಕೇಂದ್ರ ಬಜೆಟ್ ಮಂಡನೆ ಆರಂಭ: ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲು ಘೋಷಣೆ

11:24 AM Jul 23, 2024 IST | prashanth
ಕೇಂದ್ರ ಬಜೆಟ್ ಮಂಡನೆ ಆರಂಭ  ಶಿಕ್ಷಣ  ಉದ್ಯೋಗ  ಕೌಶಲ್ಯಾಭಿವೃದ್ಧಿಗಾಗಿ 1 48 ಲಕ್ಷ ಕೋಟಿ ಮೀಸಲು ಘೋಷಣೆ

ನವದೆಹಲಿ,ಜುಲೈ,23,2024 (www.justkannada.in): ಲೋಕಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಆರಂಭವಾಗಿದ್ದು  ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲಿಡುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಲೋಕಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮನಾ ಸೀತಾರಾಮನ್  ಮಂಡನೆ ಮಾಡುತ್ತಿದ್ದು, ಈ ವೇಳೆ  3ನೇ ಬಾರಿ ಪ್ರಧಾನಿಯಾಗಿರುವ ನರೇಂದ್ರ ಮೋದಿಗೆ ಅಭಿನಂದಿಸಿದರು.  ಮೋದಿ 3ನೇ ಬಾರಿ ಪ್ರಧಾನಿ ಆಗುವ ಮೂಲಕ ಇತಿಹಾಸ ಸೃಷ್ಠಿಸಿದ್ದಾರೆ. ಜನರು ಮೋದಿ ನೇತೃತ್ವದ ಸರ್ಕಾರಕ್ಕೆ ಮೂರನೇ ಬಾರಿ ಆಶೀರ್ವಾದ ಮಾಡಿದ್ದಾರೆ. ನಾವು ಅವರಿಗೆ ಆಭಾರಿಯಾಗಿದ್ದೇವೆ. ಅದೇ ರೀತಿ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿರುವ ಮೋದಿ ಅವರಿಗೆ ಅಭಿನಂದನೆ ಎಂದರು.

ಮಹಿಳಾ ಅರ್ಥವ್ಯವಸ್ಥೆಗೆ ಶರವೇಗ ನೀಡಲಾಗಿದೆ. ಬಡತನ ನಿರ್ಮೂಲನೆ ಕೃಷಿಯಲ್ಲಿ ರೈತರ ಏಳಿಗೆ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದೆ.  ಭಾರತದ ಆರ್ಥಿಕತೆ ವೃದ್ಧಿಯಾಗಿದೆ, ಹಣದುಬ್ಬರ ನಿಯಂತ್ರಣದಲ್ಲಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ 5 ವರ್ಷ ವಿಸ್ತರಣೆ ಮಾಡುತ್ತೇವೆ ಎಂದರು.

ಉದ್ಯೋಗ, ಕೌಶಲ್ಯವೃದ್ಧಿ, ಆರ್ಥಿಕತೆ ಬೆಳವಣಿಗೆಗೆ ಪೂರಕ ಬಜೆಟ್ ಇದಾಗಿರಲಿದ್ದು, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲು ಇಡುತ್ತಿದ್ದೇವೆ ಎಂದು ನಿರ್ಮಲಾ ನಿರ್ಮಲಾ ಸೀತಾರಾಮನ್ ಘೋಷಣೆ  ಮಾಡಿದರು.

Key words: Union budget,1.48 lakh crore, education, employment, skill development

Tags :

.