HomeBreaking NewsLatest NewsPoliticsSportsCrimeCinema

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.

12:23 PM Jun 15, 2024 IST | prashanth

ಬೆಂಗಳೂರು,ಜೂನ್,15,2024 (www.justkannada.in):  ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾದ  ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ವಿಧಾನಸಭೆ ಸ್ಪೀಕರ್ ಕಚೇರಿಗೆ ಆಗಮಿಸಿ ಸ್ಪೀಕರ್ ಯಟಿ ಖಾದರ್ ಅವರನ್ನ ಭೇಟಿಯಾಗಿ ಹೆಚ್.ಡಿ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ಸಲ್ಲಿಸುವ ವೇಳೆ ಶಾಸಕ ಜಿಟಿ ದೇವೇಗೌಡ, ವಿಧಾಪರಿಷತ್ ಸದಸ್ಯ ಭೋಜೇಗೌಡರು ಉಪಸ್ಥಿತರಿದ್ದರು.

ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಅಭೂತಪೂರ್ವ ಗೆಲುವು ಸಾಧಿಸಿದ ಹೆಚ್.ಡಿ ಕುಮಾರಸ್ವಾಮಿ  ಇದೀಗ ಪ್ರಧಾನಿ  ನರೇಂದ್ರ ಮೋದಿ ಸಂಪುಟದಲ್ಲಿ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ.

Key words: Union Minister, HD Kumaraswamy, resigned, MLA

Tags :
Dr. PushpaHD KumaraswamylifeMLAMysore.resignedUnion ministerYoga -integral part –
Next Article