HomeBreaking NewsLatest NewsPoliticsSportsCrimeCinema

ನಾಳೆ ಶಾಸಕ ಸ್ಥಾನಕ್ಕೆ ಕೇಂದ್ರ ಸಚಿವ ಹೆಚ್.ಡಿಕೆ ರಾಜೀನಾಮೆ.

06:32 PM Jun 14, 2024 IST | prashanth

ಬೆಂಗಳೂರು,ಜೂನ್,14,2024 (www.justkannada.in):  ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಾಳೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಹೆಚ್.ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಇದೀಗ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಕೇಂದ್ರ ಸಚಿವರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಾಳೆ ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಲಿದ್ದಾರೆ. ವಿಧಾನಸಭೆ ಸ್ಪೀಕರ್ ಕಚೇರಿಗೆ ಭೇಟಿ ನೀಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ  ಎಂಬ ಮಾಹಿತಿ ಲಭ್ಯವಾಗಿದೆ. ಪ್ರಸ್ತುತ ಹೆಚ್.ಡಿ ಕುಮಾರಸ್ವಾಮಿ ಕೇಂದ್ರ ಕೈಗಾರಿಕಾ ಸಚಿವರಾಗಿದ್ದಾರೆ.

Key words: Union Minister, HDK , resign , MLA, tomorrow

Tags :
Union Minister- HDK -resign - MLA -tomorrow
Next Article