ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಹುದ್ದೆಗಳು ಹಂತ ಹಂತವಾಗಿ ಭರ್ತಿ- ಸಚಿವ ಕೆ.ವೆಂಕಟೇಶ್.
03:06 PM Dec 01, 2023 IST
|
prashanth
ಮೈಸೂರು,ಡಿಸೆಂಬರ್,1,2023(www.justkannada.in): ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತದೆ ಎಂದು ಪಶು ಸಂಗೋಪನೆ ಇಲಾಖೆ ಸಚಿವ ಕೆ ವೆಂಕಟೇಶ್ ಹೇಳಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಕೆ.ವೆಂಕಟೇಶ್, ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಕೆ ಪಿ ಎಸ್ ಸಿ ಮೂಲಕ ಭರ್ತಿ ಮಾಡಲಾಗುತ್ತದೆ ಎಂದರು.
ಬರದ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಮೇವನ್ನು ಹೊರ ರಾಜ್ಯಗಳಿಗೆ ಸಾಗಾಣಿಕೆ ಮಾಡದಂತೆ ಈಗಾಗಲೇ ನಿರ್ಬಂಧ ಹೇರಲಾಗಿದೆ. ರಾಜ್ಯದಾದ್ಯಂತ ಮೇವಿನ ಬೀಜಗಳನ್ನು ವಿತರಣೆ ಮಾಡಲಾಗುವುದು ಎಂದು ಸಚಿವ ವೆಂಕಟೇಶ್ ತಿಳಿಸಿದರು.
Key words: Vacancies - Animal Husbandry -Department –filled- step by step – Minister- K. Venkatesh.
Next Article