For the best experience, open
https://m.justkannada.in
on your mobile browser.

ವಾಲ್ಮೀಕಿ ನಿಗಮ ಹಗರಣ: ಎಸ್ ಐಟಿಯಿಂದ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆ

12:33 PM Aug 05, 2024 IST | prashanth
ವಾಲ್ಮೀಕಿ ನಿಗಮ ಹಗರಣ  ಎಸ್ ಐಟಿಯಿಂದ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು,ಆಗಸ್ಟ್,5,2024 (www.justkannada.in):  ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು  1ನೇ ಎಸಿಎಂಎಂ ನ್ಯಾಯಾಲಯಕ್ಕೆ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.

ಎಸ್ ಐಟಿ ತನಿಖಾಧಿಕಾರಿ ವೆಂಕಟೇಶ್ ಅವರಿಂದ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. 3072 ಪುಟಗಳ ಚಾರ್ಜ್ ಶೀಟ್ ಅನ್ನು 67 ಸಾಕ್ಷಿಗಳ ಹೇಳಿಕೆ ಸಮೇತ ಸಲ್ಲಿಕೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ನ್ಯಾಯಾಂಗ ಬಂಧನದಲ್ಲಿದ್ದಾರೆ. ಹಗರಣ ಸಂಬಂಧ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜುಲೈ 10 ರಂದು ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್​​ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದರು. ನಿಗಮದ ಹಣ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮದ್ಯ ಖರೀದಿ ಮಾಡಿದ್ದಾರೆ. ಈ ಬಗ್ಗೆ ಬಸನಗೌಡ ದದ್ದಲ್​ ಮತ್ತು ನಾಗೇಂದ್ರ ನಿವಾಸದಲ್ಲಿ ಮಹತ್ವದ ದಾಖಲೆಗಳ ಪತ್ತೆಯಾಗಿವೆ ಎಂದು ಜಾರಿ ನಿರ್ದೇಶನಾಲಯದ ಪ್ರಕಟಣೆ ಮೂಲಕ ತಿಳಿಸಿತ್ತು.

ನಂತರ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಬಂಧಿಸಿತ್ತು. ಬಳಿಕ ಕೋರ್ಟ್  ಬಿ. ನಾಗೇಂದ್ರ ಅವರನ್ನು ನ್ಯಾಯಾಂಗ ಬಂಧನಕ್ಕೆ  ನೀಡಿತ್ತು.

Key words: Valmiki Corporation, scam,  charge sheet, SIT

Tags :

.