HomeBreaking NewsLatest NewsPoliticsSportsCrimeCinema

ಬಾಂಗ್ಲಾದಲ್ಲಿ ಮುಂದುವರೆದ ಹಿಂಸಾಚಾರ: ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ

11:03 AM Aug 06, 2024 IST | prashanth

ನವದೆಹಲಿ,ಆಗಸ್ಟ್,6,2024 (www.justkannada.in):  ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ರಾಜೀನಾಮೆ ನೀಡಿದ ನಂತರವೂ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರೆದಿದ್ದು ಈ ನಡುವೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆದಿದ್ದು ಚರ್ಚೆ ನಡೆಸಲಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂಸಾಚಾರ, ಅರಾಜಕತೆ ಸೃಷ್ಟಿಯಾಗಿದ್ದು, ಭಾರತ ಬಾಂಗ್ಲಾ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ಎಲ್ಲಾ ಬೆಳವಣಿಗೆಳ ಹಿನ್ನೆಲೆ ಪ್ರಧಾನಿ ಮೋದಿ ಸರ್ವಪಕ್ಷಗಳ ಸಭೆ ಕರೆದಿದ್ದು ಚರ್ಚೆ ನಡೆಸುತ್ತಿದ್ದಾರೆ. ಸಂಸತ್ ಭವನದಲ್ಲಿ ಸರ್ವಪಕ್ಷ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈಶಂಕರ್,  ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಸೇರಿ ಹಲವರು ಭಾಗಿಯಾಗಿದ್ದಾರೆ. ಸಂಸತ್ ನಲ್ಲಿ ಬಾಂಗ್ಲಾ ರಾಜಕೀಯ ಬೆಳವಣಿಗೆಗಳ ಮಹತ್ವದ ಚರ್ಚೆ ನಡೆಸುತ್ತಿದ್ದಾರೆ.

ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿದ್ದು, ಢಾಕಾದಲ್ಲಿರುವ ತಮ್ಮ ನಿವಾಸವನ್ನು ತೊರೆದಿದ್ದಾರೆ. ಅವರು ನಿನ್ನೆ ಭಾರತಕ್ಕೆ ಆಗಮಿಸಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.ಗಡಿ ಭಾಗದಲ್ಲಿ ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿದೆ.

Key words: violence, Bangladesh, PM Modi, all-party meeting

Tags :
all-party meeting.bangladeshPM Modiviolence
Next Article