HomeBreaking NewsLatest NewsPoliticsSportsCrimeCinema

ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ 48 ಗಂಟೆಗಳಲ್ಲಿ ವರ್ಗದ ಪಟ್ಟಿಯಲ್ಲಿ ನುಸುಳಿದ್ದೇಗೆ- ಸಿಎಂ ವಿರುದ್ದ ಮತ್ತೆ ಗುಡುಗಿದ ಹೆಚ್.ಡಿಕೆ.

10:14 AM Nov 18, 2023 IST | prashanth

ಬೆಂಗಳೂರು,ನವೆಂಬರ್,18,2023(www.justkannada.in): ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತನಾಡಿದ್ದ ವಿಡಿಯೋ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ಧರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತೆ ಗುಡುಗಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ,  ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ... ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಎಂದು ಪ್ರಶ್ನಿಸಿರುವ ಹೆಚ್.ಡಿ ಕುಮಾರಸ್ವಾಮಿ,  ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!! ಡೂಪ್ಲಿಕೇಟ್‌ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ ಎಂದು ಟೀಕಿಸಿದ್ದಾರೆ.

ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್‌ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್‌ ಮಾಡಿ ಸಿದ್ದರಾಮಯ್ಯನವರೇ..?

ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ; 71 ಪೊಲೀಸ್‌ ಇನಸ್ಪೆಕ್ಟರ್‌ʼಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ 'ಸುಲಿಗೆಪುತ್ರ'ನ ಕೆಚ್ಚು! ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ? ಎಂದು ವಾಗ್ದಾಳಿ ನಡೆಸಿದ್ದಾರೆ.

'ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ' ಎಂಬ ಸಿನಿಮಾವನ್ನೂ ಮಾಡಿ

ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. 'ವರ್ಗಾವರ್ಗಿ ಬಜೆಟ್‌'ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! 'ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ' ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-DCM ನಿರ್ದೇಶಕ.. ಹೇಗಿದೆ? ಎಂದು ಹೆಚ್.ಡಿಕೆ ಲೇವಡಿ ಮಾಡಿದ್ದಾರೆ.

ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ.. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ & ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಸಿಎಂ ಸಿದ್ಧರಾಮಯ್ಯ ವಿರುದ್ದ  ಹೆಚ್.ಡಿಕೆ ಹರಿಹಾಯ್ದಿದ್ದಾರೆ.

Key words: Vivekananda- collection -prince –video- list - 48 hours- HDK- CM Siddaramaiah

Tags :
CM SiddaramaiahHDKVivekananda- collection -prince –video- list - 48 hours
Next Article